ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಸಹಾಯಧನ ಅರ್ಜಿ ಅಹ್ವಾನ :

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಸಹಾಯಧನ ಅರ್ಜಿ ಅಹ್ವಾನ :

( ಕರ್ನಾಟಕ ಸರ್ಕಾರದ ಉದ್ಯಮ )



ಪ್ರಕಟಣೆ :

ಸುವಿಧಾ ತಂತ್ರ್ಯಾಂಶದ ಮುಖಾಂತರ ಆನ್ ಲೈನ್ ಅರ್ಜಿ ಸಲ್ಲಿಕೆಗಾಗಿ ಆಹ್ವಾನ 

2023-24 ನೇ ಸಾಲಿನಲ್ಲಿ ನಿಗಮದ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಪ್ರವರ್ಗ-1 ರ ಅಡಿಯಲ್ಲಿ ಬರುವ ಕ್ರಮ ಸಂಖ್ಯೆ-53(ಎ) ಯಿಂದ 53(ಎ) ವರೆಗಿನ ಉಪ್ಪಾರ ಮತ್ತು ಇದರ ಉಪಜಾತಿಗೆ ಸೇರಿದ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಬಸುವವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಯೋಜನೆಗಳ ವಿವರ :

1. ಸ್ವಯಂ ಉದ್ಯೋಗ ನೇರ ಸಾಲ ಯೋಜನೆ 
2. 2023-24 ನೇ ಸಾಲಿನ " ಅರಿವು ಶೈಕ್ಷಣಿಕ ಸಾಲ " ( ನವೀಕರಣ ) ( 2019-20 ನೇ ಸಾಲಿನ 4 ನೇ ಕಂತು ಹಾಗು 2020-21ನೇ ಸಾಲಿನ 3 ಕಂತು )
3. ಗಂಗಾ ಕಲ್ಯಾಣ ಯೋಜನೆ 
4.  ಅಮೃತ ಮಹೋತ್ಸವ ಮುನ್ನಡೆ ಯೋಜನೆ 

ಸಾಮಾನ್ಯ ಅರ್ಹತೆಗಳು ಮತ್ತು ನಿಬಂಧನೆಗಳು 

👉 ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
👉 ಕೇಂದ್ರ ಆಧಾರ್ ಅಧಿನಿಯಮ, 2016 ಸೆಕ್ಷನ್ (7) ರ ಅಡಿ ಆಧಾರ್ ಕಾರ್ಡ್ ಕಡ್ಡಾಯವಾಗಿರುತ್ತದೆ. ಅರ್ಜಿದಾರರ ಹೆಸರು, ಆಧಾರ್ ಕಾರ್ಡ್, ಜಾತಿ/ಆದಾಯ ಪ್ರಮಾಣಪತ್ರ ಮತ್ತು ಬ್ಯಾಂಕ್ ಖಾತೆಗಳಲ್ಲಿ ಹೊಂದಾಣಿಕೆ ಆಗಿರಬೇಕು.
👉 ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣಪತ್ರ ಕಡ್ಡಾಯವಾಗಿರುತ್ತದೆ.
👉 ನಿಗಮದ/ಸರ್ಕಾರದ ಯಾವುದಾದರು ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು.
👉 ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.
👉 ಸರ್ಕಾರ/ನಿಗಮವು ಕಾಲಕಾಲಕ್ಕೆ ವಿಧಿಸುವ ಇನ್ನಿತರ ಅರ್ಹತೆ / ನಿಬಂಧನೆಗಳನ್ನು ಹೊಂದಿದವರಾಗಿರಬೇಕು.

whatss


ವಿಶೇಷ ಸೂಚನೆ :

👉 ಅನುದಾನದ ಲಭ್ಯತೆಗೆ ಅನುಗುಣವಾಗಿ ಯೋಜನೆಯನ್ನು / ಸೌಲಭ್ಯವನ್ನು ಜಾರಿಗೊಳಿಸುವುದು.
👉 ಯೋಜನೆಗಳ ಮಾರ್ಗ ಸೂಚಿಯಲ್ಲಿ ಯಾವುದೇ ಬದಲಾವಣೆಗಳದಲ್ಲಿ, ಆ ದಿನಾಂಕದಿಂದ ಜಾರಿಗೆ ಬರುವಂತೆ ಯೋಜನೆಯನ್ನು ಜಾರಿಗೊಳಿಸಲಾಗುವುದು.
👉 Suvidha.karnataka.gov.in ತಂತ್ರ್ಯಾಂಶದ ಮೂಲಕ ಮಾತ್ರವೇ ಅರ್ಜಿಗಳನ್ನು ಸಲ್ಲಿಸಬೇಕು.
👉 ಹೆಚ್ಚಿನ ಮಾಹಿತಿಯನ್ನು ಸಂಬಂಧಪಟ್ಟ ಜಿಲ್ಲೆಗಳಲ್ಲಿರುವ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತ / ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ / ನಿಗಮದ ವೆಬ್ ಸೈಟ್ https;//upparadevelopment.karnataka.gov.in ರಲ್ಲಿ ಪಡೆಯಬಹುದಾಗಿದೆ.
👉 ನಿಗಮದ ಸಹಾಯವಾಣಿ ( Helpline ) ಸಂಖ್ಯೆ :7026288888 ಬೆಳಿಗ್ಗೆ 10:00 ರಿಂದ ಸಂಜೆ 5:30 ರವರೆಗೆ ಸಂಪರ್ಕಿಸಬಹುದಾಗಿದೆ.














ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು