ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ ; ವಿವಿಧ ಯೋಜನೆಗಳಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ:

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ ; ವಿವಿಧ ಯೋಜನೆಗಳಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ:




          ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳನ್ನು ಅನುಷ್ಠಾನ ಗೊಳಿಸಲಾಗುತ್ತಿದೆ. ಹಾಗೂ ಈ  ಸಹಾಯಧನ/ಸಾಲ - ಸೌಲಭ್ಯ ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31/11/2023 ಆಗಿರುತ್ತದೆ.
ಹಾಗೂ ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆ ದಿನಾಂಕ ಇರುವುದಿಲ್ಲ)

ಆನ್ಲೈನ್ ಮೂಲಕ ಅರ್ಜಿ ಸ್ವೀಕರಿಸುವ ಯೋಜನೆಗಳು:

👉  ಸ್ವಯಂ ಉದ್ಯೋಗ ನೇರಸಾಲ ಯೋಜನೆ 
👉  ಗಂಗಾ ಕಲ್ಯಾಣ ಯೋಜನೆ 
👉  ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸತು)
👉  ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ 
👉  ಸ್ವಾವಲಂಬಿ ಸಾರಥಿ ಯೋಜನೆ 
👉  ಸ್ವಯಂ ಉದ್ಯೋಗ ಸಾಲ ಯೋಜನೆ 

whatss


ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು:

✓  ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
✓  ಅರ್ಜಿದಾರರು ಮಡಿವಾಳ ಹಾಗೂ ಅದರ ಉಪ ಜಾತಿಗೆ ಸೇರಿರಬೇಕು.
✓  ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ  ಕಡ್ಡಾಯವಾಗಿರುತ್ತದೆ.
✓  ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು.
✓  ನಿಗಮದ/ಸರ್ಕಾರದ ಯಾವುದಾದರು ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು.
✓  ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.

✓  ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ  ಮಿತಿಯಲ್ಲಿರಬೇಕು. 
✓  ಅರಿವು ಯೋಜನೆಯಡಿ ವಯೋಮಿತಿ  18ವರ್ಷದಿಂದ 30 ವರ್ಷಗಳ ಮಿತಿಯಲ್ಲಿರಬೇಕು. ವಾರ್ಷಿಕ ವರಮಾನ ರು 3.50/ ಲಕ್ಷ.
✓  ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು.

ಬೆಂಗಳೂರು-ಒನ್/ಕರ್ನಾಟಕ ಒನ್/ಅಟಲ್-ಜಿ, ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ ನಡಿ ಅರ್ಜಿಯನ್ನು ಸಲ್ಲಿಸಲು ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು