ಇನ್ನುಮುಂದೆ ಬಾಪೂಜಿ ಕೇಂದ್ರದಲ್ಲಿ ವಿವಿಧ ಸೇವೆಗಳ ಪ್ರಾರಂಭ: ಸಂಪೂರ್ಣ ಮಾಹಿತಿ ಇಲ್ಲಿದೆ.....
ಇನ್ಮುಂದೆ ಗ್ರಾಮೀಣ ಜನತೆಗೆ ಅವಶ್ಯವಿರುವ ವಿವಿಧ ಸೇವೆಗಳು ಒಂದೇ ಸೂರಿನಡಿ ಲಭ್ಯ
ಬಾಪೂಜಿ ಕೇಂದ್ರಗಳಲ್ಲಿ ಈಗಾಗಲೇ ಇರುವ ಸೇವೆಗಳೊಂದಿಗೆ ಹೆಚ್ಚುವರಿಯಾಗಿ 44 ಸೇವೆಗಳನ್ನು ಅಳವಡಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ತೀರ್ಮಾನಿಸಿದೆ. ಇದರಲ್ಲಿ ಜಾತಿ, ಆದಾಯ ಪ್ರಮಾಣಪತ್ರಗಳೂ ಸೇರಿವೆ.
2016 ರಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಆರಂಭಿಸಿದ ಬಾಪೂಜಿ ಸೇವಾ ಕೇಂದ್ರಗಲ್ಲಿ ಈಗಾಗಲೇ ಒದಗಿಸುತ್ತಿರುವ 28 ಸೇವೆಗಳನ್ನು ಒದಗಿಸಲಾಗುತ್ತಿದೆ. ಗ್ರಾಮೀಣ ಜನತೆಗೆ ಅವಶ್ಯವಿರುವ ವಿವಿಧ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಇನ್ಮುಂದೆ ನಾಡಕಚೇರಿಗಳ ಅಟಲ್ ಜಿ ಜನಸ್ನೇಹಿ ಕೇಂದ್ರಗಳಲ್ಲಿ ಲಭ್ಯವಿದ್ದ 44 ಸೇವೆಗಳನ್ನು ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ.
👉 ಈಗಾಗಲೇ ಒದಗಿಸುತ್ತಿರುವ 28 ಸೇವೆಗಳ ಜೊತೆಗೆ ಅಟಲ್ ಜಿ ಜನಸ್ನೇಹಿ ಕೇಂದ್ರಗಳಲ್ಲಿನ 44 ಸೇವೆಗಳನ್ನೂ ಪಡೆಯಲು ಅವಕಾಶ.
👉 ಕಂದಾಯ, ಕಾರ್ಮಿಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಇಂಧನ ಹಾಗೂ ಆಧಾರ್ ಸೇವೆಗಳ ಸೌಲಭ್ಯ ಪಡೆಯಬಹುದು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸೇವೆಗಳೊಂದಿಗೆ ಇನ್ನು ಮುಂದೆ ಕಂದಾಯ, ಕಾರ್ಮಿಕ, ಅರೋಗ್ಯ ಮತ್ತು ಕುಟುಂಬ ಕಲ್ಯಾಣ, ಇಂಧನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸೇವೆಗಳನ್ನು ಪಡೆಯಬಹುದಾಗಿದ್ದು, ಆಧಾರ್ ಸೇವೆಗಳ ಸೌಲಭ್ಯ ಹೊಂದಬಹುದಾಗಿದೆ.
ಪ್ರತಿಯೊಂದು ಹೋಬಳಿಯು 6-7 ಗ್ರಾಮ ಪಂಚಾಯಿತಿಗಳನ್ನು ಹೊಂದಿದ್ದು, ಈ ವ್ಯಾಪ್ತಿಯ 20-50 ಸಾವಿರ ಜನರು ವಿವಿಧ ಸರಕಾರಿ ಸೇವೆಗಳನ್ನು ಪಡೆಯಲು ಹೋಬಳಿ ಕೇಂದ್ರಕ್ಕೆ ಹೋಗಬೇಕಾಗಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಿತ್ತು.
ಗ್ರಾಮೀಣ ಭಾಗದವರಿಗೆ ಆಗುತ್ತಿದ್ದ ಸಮಸ್ಯೆಗೆ ಪರಿಹಾರವಾಗಿ ನಾಡಕಚೇರಿಗಳ ಅಟಲ್ ಜಿ ಜನಸ್ನೇಹಿ ನಿರ್ದೇಶನಾಲಯದಲ್ಲಿ ಸಿಗುತ್ತಿದ್ದ ಜಾತಿ ಮತ್ತು ಆದಾಯ ಪ್ರಮಾಣಪತ್ರ, ವಾಸಸ್ಥಳ ಪ್ರಮಾಣಪತ್ರಗಳಂತಹ ಪ್ರಮುಖ ಸೇವೆಗಳನ್ನು ದಕ್ಷ ಹಾಗೂ ತ್ವರಿತ ರೀತಿಯಲ್ಲಿ ಗ್ರಾಮ ಪಂಚಾಯಿತಿಗಳ ಮೂಲಕವೇ ನೀಡಲು ಗ್ರಾಮ ಪಂಚಾಯಿತಿಗಳ ಬಾಪೂಜಿ ಸೇವಾಕೇಂದ್ರಗಳಲ್ಲಿ ನೂತನವಾಗಿ ಒದಗಿಸುವ ಸರ್ಕಾರ ನಿರ್ಧರಿಸಿದೆ.
ಗ್ರಾ.ಪಂ ಬಾಪೂಜಿ ಸೇವಾ ಕೇಂದ್ರ 44 ಹೆಚ್ಚುವರಿ ಸೇವೆಗಳು ಸೇರ್ಪಡೆ
ಗ್ರಾಮೀಣ ಜನತೆಗೆ ಅವಶ್ಯವಿರುವ ವಿವಿಧ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು 2016 ರಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಆರಂಭಿಸಿದ್ದ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಈಗಿರುವ 28 ಸೇವೆಗಳ ಜೊತೆಗೆ ಇನ್ನು 44 ಸೇವೆಗಳನ್ನು ಸೇರ್ಪಡೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕಾ ಖರ್ಗೆ ಮಾಹಿತಿ ನೀಡಿದ್ದಾರೆ.
ಇನ್ನು ಮುಂದೆ ಸಾರ್ವಜನಿಕರು ಗ್ರಾಪಂ ಗಳಲ್ಲಿಯೇ ಕಂದಾಯ, ಕಾರ್ಮಿಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಇಂಧನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸೇವೆಗಳನ್ನು ಪಡೆಯಬಹುದಿದ್ದು, ಆಧಾರ್ ಸೇವೆಗಳ ಸೌಲಭ್ಯವನ್ನು ಹೊಂದಬಹುದಾಗಿದೆ. ಇದರಿಂದಾಗಿ ಹೋಬಳಿ ಕೇಂದ್ರಕ್ಕೆ ಅಲೆಯುವುದು ತಪ್ಪಲಿದ್ದು, ಮನೆಬಾಗಿಲನಲ್ಲಿಯೇ ಸೇವೆ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.
ನಾಡಕಚೇರಿಗಳ ಅಟಲ್ ಜಿ ಜನಸ್ನೇಹಿ ನಿರ್ದೇಶನಾಲಯದಡಿ ಸಿಗುತ್ತಿದ್ದ ಆದಾಯ ಪ್ರಮಾಣಪತ್ರ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ವಾಸಸ್ಥಳ ಪ್ರಮಾಣಪತ್ರಗಳಂತಹ ಪ್ರಮುಖ ಸೇವೆಗಳನ್ನು ದಕ್ಷ ಹಾಗೂ ತ್ವರಿತ ರೀತಿಯಲ್ಲಿ ಗ್ರಾಮ ಪಂಚಾಯತಿಗಳ ಮೂಲಕವೇ ನೀಡಲು ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ನೂತನವಾಗಿ ಒದಗಿಸಲು ಸರ್ಕಾರವು ನಿರ್ಧರಿಸಿದೆ.
ಯಾವೆಲ್ಲಾ ಸೇವೆಗಳ ಲಭ್ಯ :
⭐ ಜನನ-ಮರಣ ಪ್ರಮಾಣಪತ್ರ
⭐ ಜಾತಿ/ಆದಾಯ ಧೃಡೀಕರಣ ಪತ್ರ
⭐ ವಾಸಸ್ಥಳ-ಗೇಣಿರಹಿತ ಧೃಡೀಕರಣ
⭐ ಕೃಷಿ ಕುಟುಂಬದ ಧೃಡೀಕರಣ ಪತ್ರ
⭐ ನಿರುದ್ಯೋಗಿ ಧೃಡೀಕರಣ್ ಪತ್ರ
⭐ ಭೂ ಹಿಡುವಳಿ ಪ್ರಮಾಣ ಪತ್ರ
⭐ ಕುಟುಂಬ ವಂಶವೃಕ್ಷ ಧೃಡೀಕರಣ ಪತ್ರ
⭐ ಅಂಗವಿಕಲ ಪೋಷಣಾ ವೇತನ
⭐ ಸಂಧ್ಯಾ ಸುರಕ್ಷಾ ಯೋಜನೆ
⭐ ಅಂತ್ಯ ಸಂಸ್ಕಾರ ಯೋಜನೆ
⭐ ಮತ್ತಿತರ 44 ಯೋಜನೆಗಳು
Tags
Govt.scheme