ಭಾರತೀಯ ಸೇನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಪ್ರಕ್ರಿಯೆಯು ಇದೆ ಅಕ್ಟೋಬರ್ 10ರಿಂದ ಆರಂಭವಾಗಿದೆ. ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸೇನೆಯಲ್ಲಿ ಸೇರಲು ಬಯಸುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ.
ಭಾರತೀಯ ಸೇನೆಯಲ್ಲಿ ಒಟ್ಟು 90ಕ್ಕೂ ಹೆಚ್ಚು ಟೆಕ್ನಿಕಲ್ ಎಂಟ್ರಿ ಸ್ಕೀಮ್ 51 ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ನವೆಂಬರ್ 12ರೊಳಗೆ ಸಲ್ಲಿಸಬೇಕು. ಈ ಮೂಲಕ ಕೇಂದ್ರ ಸರ್ಕಾರೀ ವ್ಯಾಪ್ತಿಯ ಅದರಲ್ಲೂ ರಕ್ಷಣಾ ಇಲಾಖೆ ವಿಭಾಗದಲ್ಲಿ ಕಾರ್ಯ ನಿರ್ವಹಿಸಲು ಇರುವ ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು. ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೂ ಮುನ್ನ ನೇಮಕಾತಿ ಪ್ರಕ್ರಿಯೆ ಕುರಿತು ಪೂರ್ಣ ತಿಳಿದುಕೊಳ್ಳಲು ಈ ಲೇಖನ ಓದಿ.
ಶೈಕ್ಷಣಿಕ ಅರ್ಹತೆ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಕಡ್ಡಾಯವಾಗಿ 12ನೇ ತರಗತಿ ಉತ್ತೀರ್ಣವಾಗಿರಬೇಕು. ಅಭ್ಯರ್ಥಿಗಳ ವಯಸ್ಸು ಕನಿಷ್ಠ 16.5 ವರ್ಷ ಹಾಗೂ ಗರಿಷ್ಟ 19.5 ವರ್ಷ ಮೀರಿರಬಾರದು. ಮೀಸಲಾತಿಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ ಎಂದು ನೇಮಕಾತಿ ಅಧಿಸೂಚನೆ ಮಾಹಿತಿ ನೀಡಿದೆ.
ಅರ್ಜಿ ಶುಲ್ಕದ ಮಾಹಿತಿ:
ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳಿಗೆ ಯಾವ ಅರ್ಜಿ ಶುಲ್ಕ ನಿಗದಿ ಮಾಡಲಾಗಿಲ್ಲ. ಅರ್ಜಿ ಸಲ್ಲಿಎಕ್ ಬಳಿಕ ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ನಡೆಸಲಾಗುವುದು. ಬಳಿಕ SBI ಸಂದರ್ಶನ ನಡೆಯಲಿದೆ. ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿಯಾದರೂ ಹುದ್ದೆ ನೀಡಲಾಗುವುದು.
ಕೊನೆಯ ದಿನಾಂಕ ಮುಂದಿನ ನವೆಂಬರ್ 12ರೊಳಗೆ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ.
Tags
Jobs