2023-24 ನೇ ಸಾಲಿನ 2 ವರ್ಷದ ಬಿ.ಇಡಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ:
ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ..
ಬಿ.ಇಡಿ ಅಡ್ಮಿಷನ್ 2023-24 ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು 2 ವರ್ಷ ಬಿ.ಇಡಿ ಕೋರ್ಸ್ ಅಡ್ಮಿಷನ್ ಪ್ರಕಟಣೆ ಹೊರಡಿಸಿ, ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಪ್ರಮುಖ ದಿನಾಂಕ, ಅರ್ಹತೆ ಇತರೆ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ.
2023-24 ಸಾಲಿಗೆ ಎರಡು ವರ್ಷದ ಬಿ.ಇಡಿ ಕಾಲೇಜುಗಳಲ್ಲಿನ ಸರ್ಕಾರೀ ಕೋಟಾದ ಸೀಟುಗಳ ದಾಖಲಾತಿಗೆ ಇದೀಗ ನೋಟಿಫೀಕೇಷನ್ ಬಿಡುಗಡೆ ಮಾಡಲಾಗಿದೆ. ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.
ಪ್ರಮುಖ ದಿನಾಂಕಗಳು :
ಆನ್ಲೈನ್ ಅರ್ಜಿ ಸಲ್ಲಿಸಲು ಆರಂಭಿಕ್ ದಿನಾಂಕ 31-10-2023
ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29-11-2023
ಅಭ್ಯರ್ಥಿಗಳ ಆಯ್ಕೆ ವಿಧಾನ :
ಅಭ್ಯರ್ಥಿಗಳಿಗೆ ಸ್ವೀಕೃತವಾದ ಆನ್ಲೈನ್ ಅರ್ಜಿಗಳಲ್ಲಿ ನೀಡಿರುವ ಮಾಹಿತಿಯ ಆಧಾರ ಮೇಲೆ ಅರ್ಹತಾ ಪಟ್ಟಿ ಸಿದ್ಧಪಡಿಸಲಾಗುತ್ತದೆ. ಪದವಿ ಶಿಕ್ಷಣದ ಅಂಕಗಳ ಆಧಾರದಲ್ಲಿ ಮೆರಿಟ್ ಪಟ್ಟಿ ಸಿದ್ಧಪಡಿಸಿ, ಕೌನ್ಸಿಲಿಂಗ್ ನಡೆಸಿ, ಸೀಟು ಹಂಚಿಕೆ ಮಾಡಲಾಗುತ್ತದೆ.
ಪ್ರವೇಶಕ್ಕೆ ಶೈಕ್ಷಣಿಕ ಅರ್ಹತೆಗಳು?
ಕನಿಷ್ಠ 50% ಅಂಕಗಳೊಂದಿಗೆ ಪದವಿ ಅಥವಾ 50% ಅಂಕಗಳೊಂದಿಗೆ ವಿಜ್ಞಾನ / ಸಾಮಾಜಿಕ ವಿಜ್ಞಾನಗಳು / ಮಾನವಿಕ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಉತ್ತೀರ್ಣರಾಗಿರಬೇಕು. ಕನಿಷ್ಠ 55% ರಷ್ಟು ಅಂಕಗಳೊಂದಿಗೆ ಇಂಜಿನಿಯರಿಂಗ್ ನಲ್ಲಿ ಪದವಿ/ ವಿಜ್ಞಾನ ಮತ್ತು ಗಣಿತಶಾಸ್ತ್ರದಲ್ಲಿ ಪರಿಣಿತ ಪಡೆದಿರುವ ತಂತ್ರಜ್ಞಾನ ಅಥವಾ ಇನ್ಯಾವುದೇ ತತ್ಸಮಾನ ವಿದ್ಯಾರ್ಹತೆ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.
ಶುಲ್ಕ ವಿವರ :
👉 ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ, ಪ್ರವರ್ಗ- 1 ಅಭ್ಯರ್ಥಿಗಳಿಗೆ ರೂ 100
👉 ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
👉 ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ 300
ಕೋರ್ಸಿಗೆ ದಾಖಲಾತಿ ಸಂದರ್ಭದಲ್ಲಿ ಪಾವತಿಸಬೇಕಾದ ಶುಲ್ಕದ ವಿವರ :
ಕಲಾ ವಿಭಾಗದ ಪ್ರವೇಶಾತಿಗೆ ಶುಲ್ಕದ ವಿವರ
ಸರ್ಕಾರೀ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಶುಲ್ಕ ರೂ 5,025
ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಶುಲ್ಕ ರೂ 6,025
ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಶುಲ್ಕ ರು 10,025
ವಿಜ್ಞಾನ ವಿಭಾಗದಲ್ಲಿ ಬಿ.ಇಡಿ ಕೋರ್ಸ್ ಪ್ರವೇಶಕ್ಕೆ ಶುಲ್ಕ
ಸರ್ಕಾರೀ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಶುಲ್ಕ ರೂ 5,175
ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಶುಲ್ಕ ರೂ 6,175
ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಶುಲ್ಕ ರೂ 10,175
ಸೀಟು ಹಂಚಿಕೆ ಕೌನ್ಸಿಲಿಂಗ್ ನಡೆಯುವ ಸ್ಥಳಗಳು:
ಬಿ.ಇಡಿ ಕಾಲೇಜು / ಸಂಸ್ಥೆ ಹಂಚಿಕೆ ಸಹಿತ ಜಿಲ್ಲಾ ನೋಡಲ್ ಕೇಂದ್ರಗಳ ಹಂತದ ಆಯ್ಕೆಪಟ್ಟಿಯಲ್ಲಿ ಆಯ್ಕೆಯಾಗಿದ್ದು, ಹಂಚಿಕೆಯಾದ ಸಂಸ್ಥೆ ಒಪ್ಪಿಗೆ ಇಲ್ಲದಿದ್ದ ಅಭ್ಯರ್ಥಿಗಳು ಕೌನ್ಸಿಲಿಂಗ್ ನಾಲ್ ಭಾಗವಹಿಸಬಹುದು.
Tags
Education