ರಾಜ್ಯ ಸರ್ಕಾರದ ವಿದ್ಯಾರ್ಥಿವೇತನ 2023, ಆನ್ ಲೈನ್ ಅರ್ಜಿ ಆಹ್ವಾನ !

ರಾಜ್ಯ ಸರ್ಕಾರದ ವಿದ್ಯಾರ್ಥಿವೇತನ 2023, ಆನ್ ಲೈನ್ ಅರ್ಜಿ ಆಹ್ವಾನ !

Karnataka SSP Scholarship 2023 For Pre-Matric Students Apply Online !



 

ಕರ್ನಾಟಕ ರಾಜ್ಯ ಸರ್ಕಾರ ನೀಡುವ ವಿದ್ಯಾರ್ಥಿವೇತನಕ್ಕಾಗಿ (SSP Scholarship 2023) ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಗತ್ಯ ದಾಖಲೆಗಳೊಂದಿಗೆ ನಿಗದಿ ಪಡಿಸಲಾಗಿರುವ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಮುಂದುವರೆಸಲು ಪ್ರೋತ್ಸಾಹ ನೀಡಲು ಹಾಗೂ ವಿದ್ಯಾಭ್ಯಾಸದ ನಡುವೆ ಶಾಲೆ ಬಿಡುವುದನ್ನು ತಪ್ಪಿಸಲು ಮತ್ತು ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಉತ್ತೇಜಿಸಲು ರಾಜ್ಯ ಸರ್ಕಾರ ವಿದ್ಯಾರ್ಥಿವೇತನ ನೀಡುತ್ತದೆ.

ಅರ್ಹತೆಗಳು :

👉ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು. 
👉ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
👉ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳನ್ನು ಪಡೆದಿರಬೇಕು.
👉1 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಹೊಸ ವಿದ್ಯಾರ್ಥಿಗಳೆಂದು ಪರಿಗಣಿಸಲಾಗುವುದು.

ಮಾಹಿತಿ :

ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಹಾಗೂ ಅಲ್ಪಸಂಖ್ಯಾತರ ಇಲಾಖೆ ವ್ಯಾಪ್ತಿಯ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇನ್ನುಳಿದ ಸಮುದಾಯದ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ವಿವರ ದೊರೆತ ತಕ್ಷಣ ಮಾಹಿತಿ ನೀಡಲಾಗುವುದು.

SSP Scholarship 2023 Last Date : 

ಸಮಾಜ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2023-24 ನೇ ಸಾಲಿಗೆ 1 ನೇ ತರಗತಿಯಿಂದ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ನೀಡಲು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


whatss

ದಾಖಲೆಗಳು :

ಮೆಟ್ರಿಕ್ ನಂತರ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಸಲು ಅಗತ್ಯವಿರುವ ಮಾಹಿತಿಗಳು ಅಥವಾ ದಾಖಲೆಗಳು ಈ ಕೆಳಗಿನಂತಿವೆ.
⭐ವಿದ್ಯಾರ್ಥಿಗಳ ಎಸ್.ಎ.ಟಿ.ಎಸ್. ಗುರುರತಿನ ಸಂಖ್ಯೆ.
⭐ವಿದ್ಯಾರ್ಥಿಯ ಮೊಬೈಲ್ ಸಂಖ್ಯೆ (ಪಾಲಕರ)
⭐ಜಾತಿ ಮತ್ತು ಆದಾಯ ಪ್ರಮಾಣಪತ್ರ ( RD ಸಂಖ್ಯೆ ಇರುವ)

   ಇಲಾಖೆಯ ಹೆಸರು                                               ಕೊನೆಯ ದಿನಾಂಕ

ಸಮಾಜ ಕಲ್ಯಾಣ ಇಲಾಖೆ 

ಅಲ್ಪಸಂಖ್ಯಾತರ ಇಲಾಖೆ                                           31-11-2023 


How To Apply SSP Scholarship 2023 :

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಅಗತ್ಯ ದಾಖಲೆಗಲೊಂದಿಗೆ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ( https://ssp.karnataka.gov.in) ಮೂಲಕ ಆನ್ಲೈನ್ ಮೂಲಕ ಕೊನೆಯ ದಿನಾಂಕ 31-11-2023 ರ ವೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

 



ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು