ವಾರದಲ್ಲಿ ಅದಾಲತ್ ನಡೆಸಿ ಸಮಸ್ಯೆ ಇತ್ಯರ್ಥ ।।
ಇನ್ನೊಂದು ವಾರದೊಳಗೆ ಅದಾಲತ್ ಆರಂಭಿಸಿ ಗೃಹಲಕ್ಷ್ಮಿ ಯೋಜನೆಗೆ ಉಂಟಾಗಿರುವ ಸಣ್ಣಪುಟ್ಟ ಅಡ್ಡಿಗಳನ್ನು ಶೀಘ್ರ ಪರಿಹರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಗುರುವಾರ ಸುದ್ಧಿಗಾರರ ಜೊತೆ ಮಾತನಾಡಿ ಇದುವರೆಗೂ ಮೂರೂ ಕಂತಿನ ದುಡ್ಡು ಬಾರದೆ ಇದ್ದವರಿಗೆ ಏಕಕಾಲಕ್ಕೆ 6,000 ಖಾತೆಗೆ ಜಮೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದರು.
ಈ ವರೆಗೆ 1.10 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ತಲುಪಿದೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಬಾಕಿ ಉಳಿದಿರುವ ಫಲಾನುಭವಿಗಳಿಗೆ ಆಯಾ ಪಂಚಾಯತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಸಭೆ ನಡೆಸಿ ಹಣ ಹಾಕುವ ವ್ಯವಸ್ಥೆ ಮಾಡಲಾಗುವುದು ಎಂದರು. ಯೋಜನೆಗೆ ಸುಮಾರು 50,000 ತೆರಿಗೆದಾರರು ಕೂಡ ಅರ್ಜಿ ಹಾಕಿದ್ದು ಅರ್ಜಿಗಳನ್ನು ನಿರಾಕರಿಸಿ ಡಿಲೀಟ್ ಮಾಡಲಾಗಿದೆ ಎಂದು ಇದೆ ವೇಳೆ ತಿಳಿಸಿದ್ದಾರೆ.
Tags
Govt.scheme