ಪಂಚಾಯತ್ ರಾಜ್ ಇಲಾಖೆಯ 733 ಸರ್ಕಾರಿ ಹುದ್ದೆ ನೇಮಕ :
ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಡಿಪಾರ್ಟಮೆಂಟ್ ಅಧೀನದಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳ ಪೈಕಿ 700 ಕ್ಕೂ ಹೆಚ್ಚು ಹುದ್ದೆಗೆ ಇನ್ನೊಂದು ತಿಂಗಳೊಳಗಾಗಿ ಕೆಪಿಎಸ್ ಸಿ ಅಧಿಸೂಚನೆಯಲ್ಲಿ ಹೊರಡಿಸಿ, ನೇಮಕ ಪ್ರಕ್ರಿಯೆ ನಡೆಸಲಿದೆ.
ಕರ್ನಾಟಕ ರಾಜ್ಯ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ರಾಜ್ಯದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಖಾಲಿ ಇರುವ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ (ಪಿಡಿಓ), ಕಾರ್ಯದರ್ಶಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಸೇರಿ ಒಟ್ಟು 733 ಹುದ್ದೆಗಳ ಭರ್ತಿಗೆ ಅಧಿಸೂಚಿಸುವ ಕುರಿತು ಮಾಹಿತಿ ನೀಡಿದೆ.
ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳ ಭರ್ತಿಗೆ ಈಗಾಗಲೆ ಕೆಪಿಎಸ್ ಸಿ ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಬೃಹತ್ ಸಂಖ್ಯೆಯಲ್ಲಿ ಖಾಲಿ ಹುದ್ದೆಗಳು ಇರುವುದರಿಂದ ಖಾಲಿ ಇರುವ ಸಿಬ್ಬಂದಿಗೆ ಕೆಲಸದ ಒತ್ತಡ ಹೆಚ್ಚಾಗಿದೆ. ಹುದ್ದೆ ಭರ್ತಿಯಾದರೆಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಖಾಲಿ ಇರುವ ಒಟ್ಟು ಹುದ್ದೆಗಳ ಪೈಕಿ, ಪ್ರಸ್ತುತ 733 ಹುದ್ದೆಗಳಿಗೆ ಮಾತ್ರ ಅಧಿಸೂಚನೆಯನ್ನು ನವೆಂಬರ್ ಅಂತ್ಯಕ್ಕೆ ಅಥವಾ ಡಿಸೇಂಬರ್ ಮೊದಲ ವಾರದಲ್ಲಿ ಅಧಿಕೃತವಾಗಿ ಹೊರಡಿಸಲಾಗುತ್ತದೆ ಎಂದು ಕರ್ನಾಟಕ ಡಿಐಪಿಆರ್ ಇಲಾಖೆ ತಿಳಿಸಿದೆ.
ಇಲಾಖೆಯಲ್ಲಿ ಒಟ್ಟು ಖಾಲಿ ಇರುವ ಹುದ್ದೆಗಳ ವಿವರ
ಕೆಪಿಎಸ್ ಸಿ ಮೂಲಕ ಭರ್ತಿ ಮಾಡಲಿರುವ ಹುದ್ದೆಗಳ ವಿವರ :
ಹುದ್ದೆ ವಾರು ವಿದ್ಯಾರ್ಹತೆ