ಮನೆ ಕಟ್ಟಿಸಲು ಕೇಂದ್ರದಿಂದ ಸಾಲ ಮತ್ತು ಸಹಾಯಧನಕ್ಕೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ...!

 ಮನೆ ಕಟ್ಟಿಸಲು ಕೇಂದ್ರದಿಂದ ಸಾಲ ಮತ್ತು ಸಹಾಯಧನಕ್ಕೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ...!



 

ಎಲ್ಲರಿಗೂ ನಮಸ್ಕಾರ, ಇಂದಿನ ವರದಿಯಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಬಗ್ಗೆ ತಿಳಿದುಕೊಳ್ಳೋಣ. ದೇಶದಲ್ಲಿ ಆರ್ಥಿಕವಾಗಿ ದುರ್ಬಲ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಕೇಂದ್ರ ಸರ್ಕಾರದಿಂದ ಗೃಹ ಸಾಲಗಳ  ಬಡ್ಡಿ ರಹಿತ ಸಬ್ಸಿಡಿಗಳನ್ನು ನೀಡಲಾಗುತ್ತದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ. 

ಪ್ರಧಾನಮಂತ್ರಿ ಆವಾಸ್ ಯೋಜನೆಯ ವಿವರ :

ಅಧಿಕೃತ ವೆಬ್ ಸೈಟ್ : https://pmaymis.gov.in/
ಪ್ರಾರಂಭ ದಿನಾಂಕ : 2015-june-25
ಟೋಲ್ ಫ್ರಿ ಸಂಖ್ಯೆಗಳು : 1800-11-6163-hudko 1800 11 3377, 1800113388-NHB
ದೂರುಗಳಿಗಾಗಿ : grievance-pmay@gov.in
ಕಚೇರಿ ವಿಳಾಸ : ವಸತಿ, ನಗರ ವ್ಯವಹಾರಗಳ ಸಚಿವಾಲಯ, ನಿರ್ಮಾಣ್ ಭವನ್, ನವದೆಹಲಿ -
ಸಂಪರ್ಕ ಸಂಖ್ಯೆ : 0112306 3285, 0112306 0484
ಇಮೇಲ್ : pmaymis-mhupa@gov.in
ಗುರಿ : ಬಡವರಿಗೆ ಕೈಗೆಟುಕುವ ದರದಲ್ಲಿ ವಸತಿ ಒದಗಿಸುವುದು.

ಪ್ರಧಾನ ಮಂತ್ರಿ ಆವಾಸ್ ಯೋಜನೆ ( PMAY )

ಈ ಯೋಜನೆಯು ದೇಶದ ಹಲವು ಕುಟುಂಬಗಳಿಗೆ ಮನೆ ನಿರ್ಮಿಸಿಕೊಳ್ಳಲು ಆರ್ಥಿಕ ನೆರವು ನೀಡುತ್ತಿದೆ. ಎಲ್ಲ ಬಡವರಿಗೆ ಕೈಗೆಟಕುವ ದರದಲ್ಲಿ ವಸತಿ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಆವಾಸ್ ಯೋಜನೆ ಆರಂಭಿಸಿದೆ. ಈ ಯೋಜನೆಯಡಿಯಲ್ಲಿ ಮನೆ ಖರೀದಿಸಲು ಸರ್ಕಾರವು ಮೊದಲ ಬಾರಿಗೆ 2.62 ಲಕ್ಷ ರೂಪಾಯಿಗಳ ಸಹಾಯಧನ ನೀಡುತ್ತದೆ. ಇದರಿಂದಾಗಿ ಜನರು ತಮ್ಮ ಕನಸಿನ ಮನೆಯನ್ನು ಸುಲಭವಾಗಿ ಖರೀದಿಸಬಹುದು ಮತ್ತು ಕಟ್ಟಿಕೊಳ್ಳಬಹುದು. ಈ ಯೋಜನೆಯನ್ನು 2015 ರ ಜೂನ್ 1 ರಂದು ಮೊದಲ ಬಾರಿಗೆ ಪರಿಚಯಿಸಲಾಯಿತು. ಈ ಯೋಜನೆಯಡಿ ವಾರ್ಷಿಕ ಶೇ.6.50 ರ ಬಡ್ಡಿದರದಲ್ಲಿ ಸಾಲ ಲಭ್ಯವಾಗುತ್ತದೆ.

ಈ ಯೋಜನೆಯಡಿ ವಾರ್ಷಿಕ ಶೇ. 6.50 ರ ಬಡ್ಡಿದರದಲ್ಲಿ ಸಾಲ ಲಭ್ಯವಾಗುತ್ತದೆ. PMAY ಯೋಜನೆಯಡಿ ಪ್ರಯೋಜನ ಪಡೆಯುವ ಗಡುವನ್ನು ಕೇಂದ್ರ ಸರ್ಕಾರವು 2024 ರ ಡಿಸೇಂಬರ್ 31ರವರೆಗೆ ವಿಸ್ತರಿಸಿದೆ.

 ಅರ್ಹತೆ ಅಥವಾ ಷರತ್ತುಗಳು :

ಈ ಯೋಜನೆಯನ್ನು ಬಳಸುವ ಪ್ರಮುಖ ಷರತ್ತು ಎಂದರೆ ಅರ್ಜಿದಾರರಿಗೆ ಒಮ್ಮೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ನೀವು ಮೊದಲ ಬಾರಿಗೆ ತಪ್ಪ ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸುತ್ತಿದ್ದರೆ, ಈ ಯೋಜನೆಯ ಪ್ರಯೋಜನವನ್ನು ನೀವು ಪಡೆಯಲು ಸಾಧ್ಯವಾಗುವುದಿಲ್ಲ. ನೀವು ಅರ್ಜಿಯನ್ನು ಬಹಳ ಎಚ್ಚರಿಕೆಯಿಂದ ಸಲ್ಲಿಸಬೇಕು. PMAY ಯೋಜನೆಯಡಿ, ಎಲ್ಲಾ ಫಲಾನುಭವಿಗಳಿಗೆ ಕೇವಲ ವಾರ್ಷಿಕ ಶೇ. 6.50 ಬಡ್ಡಿದರದಲ್ಲಿ 20 ವರ್ಷಗಳವರೆಗೆ ವಸತಿ ಸಾಲ ನೀಡಲಾಗುತ್ತದೆ. ನೆಲ ಮಹಡಿಯಲ್ಲಿರುವ ಮನೆಗಳು ಅಂಗವಿಕಲರಿಗೆ ಮತ್ತು ಹಿರಿಯ ನಾಗರಿಕರಿಗೆ ಮಾತ್ರ ಮೀಸಲಾಗಿದೆ. ಗೃಹ ನಿರ್ಮಾಣದಲ್ಲಿ ಸುಸ್ಥಿರ, ಪರಿಸರ ಸ್ನೇಹಿ ತಂತ್ರಜ್ಞಾನ ಬಳಸಲಾಗುತ್ತದೆ. ಈ ಯೋಜನೆಯು ದೇಶದ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಅನ್ವಯಿಸುತ್ತದೆ. ಮೂರೂ ಹಂತಗಳಲ್ಲಿ ನಗರ ಪ್ರದೇಶಗಳಲ್ಲಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.

ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ ಎರಡು ವಿಧ :

👉 ಪ್ರಧಾನಮಂತ್ರಿ ಆವಾಸ್ ಯೋಜನೆ ನಗರ 

👉 ಪ್ರಧಾನಮಂತ್ರಿ ಆವಾಸ್ ಯೋಜನೆ ಗ್ರಾಮೀಣ 

ಪ್ರಧಾನಮಂತ್ರಿ ಆವಾಸ್ ಯೋಜನೆ ಗ್ರಾಮೀಣ ಯೋಜನೆಯನ್ನು ಈ ಹಿಂದೆ ಇಂದಿರಾ ಗಾಂಧಿ ಆವಾಸ್ ಯೋಜನೆ ಎಂದು ಕರೆಯಲಾಗುತ್ತಿತ್ತು. ಮಾರ್ಚ್ 2016 ರಲ್ಲಿ ಹೆಸರು ಬದಲಾಯಿಸಿತು.

whatss

ಅರ್ಜಿ ಸಲ್ಲಿಸುವುದು ಹೇಗೆ ?

ವಸತಿ ನಗರಾಭಿವೃದ್ಧಿ ಸಚಿವಾಲಯದ ಅಧಿಕೃತ ವೆಬ್ ಸೈಟ್ ಮೂಲಕ ನಾವು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು, ಸಲ್ಲಿಸುವ ಹಂತಗಳು ಈ ಕೆಳಗಿನಂತೆ ಇದೆ.

ಇಲ್ಲಿ ಕೊಡಲಾದ ಅಧಿಕೃತ ವೆಬಸೈಟ್ ಮೇಲೆ ಕ್ಲಿಕ್ ಮಾಡಿ.
https://pmaymis.gov.in/open/Check_Aadhar_comb=b

ಆಧಾರ್ ಸಂಖ್ಯೆಯನ್ನು ನಮೂದಿಸಬೇಕು. ಆಧಾರ್ ಸಂಖ್ಯೆಯನ್ನು ಪರಿಶೀಲಿಸಿದ ನಂತರ ಮುಂದಿನ ಪುಟಕ್ಕೆ ಹೋಗಿ.

ಮುಂದುವರೆದು ನಿಮ್ಮ ಎಲ್ಲಾ ವ್ಯಯಕ್ತಿಕ ಮಾಹಿತಿ ಮತ್ತು ಎಲ್ಲಾ ದಾಖಲೆ ಅಪ್ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಸಿ.

ಫಲಾನುಭವಿಗಳು ಯಾರು ?

ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಗಳು, ಬಿಪಿಎಲ್ ಕಾರ್ಡ್ ಹೊಂದಿದವರು, ಅಲ್ಪಸಂಖ್ಯಾತರು, ಕೂಲಿ ಕಾರ್ಮಿಕರು ಅರೆಸೇನಾ ಪಡೆಗಳು, ವಿಧವೆಯರು, ಮಾಜಿ ಸೈನಿಕರು, ನಿವೃತ್ತಿ ಯೋಜನೆಯಡಿಯಲ್ಲಿರುವವರು.


 





ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು