ಮಹಿಳೆಯರು ಸ್ವ-ಉದ್ಯೋಗಿಯಾಗಲು ಸರ್ಕಾರದಿಂದ ಸಹಾಯಧನ: ಈಗಲೇ ಅರ್ಜಿ ಹಾಕಿ.... ಇಲ್ಲಿದೆ ಸಂಪೂರ್ಣ ಮಾಹಿತಿ:

ಮಹಿಳೆಯರು ಸ್ವ-ಉದ್ಯೋಗಿಯಾಗಲು ಸರ್ಕಾರದಿಂದ ಸಹಾಯಧನ: ಈಗಲೇ ಅರ್ಜಿ ಹಾಕಿ.... ಇಲ್ಲಿದೆ ಸಂಪೂರ್ಣ ಮಾಹಿತಿ:


 

             ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳುವ ಮೂಲಕ ಸ್ವಾವಲಂಬನೆ ಜೀವನ ನಡೆಸಿ ಆರ್ಥಿಕ, ಸಾಮಾಜಿಕವಾಗಿ ಸಬಲರಾಗಬೇಕು ಎಂದು ರಾಜ್ಯ ಸರ್ಕಾರ ಸಹಾಯ ಧನ ನೀಡುತ್ತಿದ್ದು, ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿದೆ. 
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 18 ವರ್ಷದಿಂದ 55 ವರ್ಷದೊಳಗೆ ವಯೋಮಿತಿ ಇರುವ ಆಸಕ್ತ ನಿರುದ್ಯೋಗ ಮಹಿಳೆಯರಿಗೆ ಸ್ವ ಉದ್ಯೋಗಕ್ಕಾಗಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 2023-24 ನೇ ಶಾಲಿನ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಕ್ಕೆ ಕರೆ ನೀಡಿದ್ದು ಮಹಿಳೆಯರು ನಿಗದಿತ ಸಮಯದೊಳಗೆ ಸೂಕ್ತ ಮಾಹಿತಿಗಳೊಂದಿಗೆ ಅರ್ಜಿ ಸಲ್ಲಿಸಿ.

ಉದ್ಯೋಗಿನಿ ಯೋಜನೆ :

ಈ ಯೋಜನೆಯ ಪ್ರಕಾರ ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಯಾಗಲು ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತದೆ. ಉದ್ಯೋಗಿನಿ ಯೋಜನೆಗೆ ಅರ್ಜಿ ಸಲ್ಲಿಸುವವರ ವಯೋಮಿತಿ 18 ರಿಂದ 55 ವರ್ಷದೊಳಗಿರಬೇಕು.

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ :

ಆದಾಯ ಮಿತಿ : 2 ಲಕ್ಷ ರೂ 
ಘಟಕ ವೆಚ್ಚ : ಕನಿಷ್ಠ 1 ಲಕ್ಷ ರೂ ದಿಂದ ಗರಿಷ್ಟ 3 ಲಕ್ಷ ರೂ 
ಸಹಾಯಧನ ಶೇ 50 % 

ಸಾಮಾನ್ಯ ವರ್ಸ್ಗ :

ಆದಾಯ ಮಿತಿ : 1.5 ಲಕ್ಷ ರೂ 
ಘಟಕ ವೆಚ್ಚ : ಗರಿಷ್ಟ ರೂ 3 ಲಕ್ಷ ರೂ 
ಸಹಾಯಧನ ವೆಚ್ಚ : 30% 

ಚೇತನ ಯೋಜನೆ :

ಚೇತನ ಯೋಜನೆ ಅಡಿಯಲ್ಲಿ ದಮನಿತ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು  ನಿಗಮದಿಂದ 30 ಸಾವಿರ ರೂ ಪ್ರೋತ್ಸಾಹಧನ ನೀಡಲಾಗುತ್ತಿದ್ದು, ವಯೋಮಿತಿ 18 ವರ್ಷ ಮೇಲ್ಪಟ್ಟಿರಬೇಕು.

whatss

ಧನಶ್ರೀ ಯೋಜನೆ :

ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು 30 ಸಾವಿರ ರೂ ಪ್ರೋತ್ಸಾಹಧನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಮಹಿಳೆಯ ವಯೋಮಿತಿ 18 ರಿಂದ 60 ವರ್ಷಗಳಿರಬೇಕು.

ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ :

ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ನಿಗಮದ ವತಿಯಿಂದ 30 ಸಾವಿರ ರೂ ಪ್ರೋತ್ಸಾಹ ಧನ ನೀಡಲಾಗುತ್ತದೆ.

ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ :

1993-94 ಮತ್ತು 2007-08 ರ ಸಮೀಕ್ಷೆಯಲ್ಲಿ ಗುರುತಿಸಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ನಿಗಮದಿಂದ 30 ಸಾವಿರ ರೂ  ಪ್ರೋತ್ಸಾಹಧನ ನೀಡಲಾಗುತ್ತದೆ.

ಮೇಲಿನ ಈ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸುವವರು 22/11/2023 ರಿಂದ ಕೊನೆಯ ದಿನಾಂಕ 22/12/2023 ರವೊಳಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು:

ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸಿರಬೇಕು.

ಉದ್ಯೋಗಿನಿ ಯೋಜನೆಯ SCSP / TSP ಬಳಕೆಯಾಗದ ಅನುದಾನದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾಪೇಕ್ಷಿಗಳು / ಅರ್ಜಿದಾರರು ಸಹ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದು.

 
ಅರ್ಜಿದರರು ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕು.

ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಅರ್ಜಿದಾರರು ಮಾನ್ಯ ಸಚಿವರು/ ಮಾನ್ಯ ಶಾಸಕರು, ಕರ್ನಾಟಕ ಸರ್ಕಾರ/ ಮಾನ್ಯ ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಇವರ ಶಿಫಾರಸ್ಸು ಪತ್ರ ಪಡೆದು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದು.


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು