ಹೊಸ ರೇಷನ್ ಕಾರ್ಡ್ ವಿತರಣೆ : ಸರ್ಕಾರದಿಂದ ಗುಡ್ ನ್ಯೂಸ್.....!
ನಮಸ್ಕಾರ, ನೀವು ಹೊಸ ರೇಷನ್ ಕಾರ್ಡ್ ಪಡೆಯಬೇಕಾ? ಸರ್ಕಾರ ಕೊಡುವ ಪಡಿತರ ಚೀಟಿಯ ಎಲ್ಲ ಸೌಲಭ್ಯಗಳನ್ನು ನಿಮಗೂ ಬೇಕಾ? ಹಾಗಿದ್ದರೆ, ಇಲ್ಲಿದೆ ನಿಮಗೆ ಗುಡ್ ನ್ಯೂಸ್. ಅದು ಏನಂತೀರಾ? ಈ ಲೇಖನದಲ್ಲಿ ಹೊಸ ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡುವ ಬಗ್ಗೆ ಮಾಹಿತಿ ನೀಡಲಾಗಿದೆ ಓದಿರಿ.
ನಮ್ಮ ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಳನ್ನು ಪಡೆಯಲು ಒಟ್ಟು 2.90 ಲಕ್ಷ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಆದಷ್ಟು ಬೇಗ ಎಲ್ಲಾ ಅರ್ಜಿಗಳನ್ನು ಪರಿಶೀಲನೆ ಮಾಡಿ ಅರ್ಹತೆ ಹೊಂದಿರುವ ಕುಟುಂಬಗಳಿಗೆ ಹೊಸ ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ ಎಚ್ ಮುನಿಯಪ್ಪ ಅವರು ಮಾಹಿತಿ ನೀಡಿದ್ದಾರೆ.
ಅನೇಕ ಅರ್ಹ ಜನರು ಸಿಎಂ ಸಿದ್ಧರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯಲು ಹಾಗೂ ಇನ್ನಿತರ ಸರ್ಕಾರದ ಹೊಸ ಹೊಸ ಯೋಜನೆಗಳ ಸೌಲಭ್ಯಕ್ಕಾಗಿ ಹೊಸ ಪಡಿತರ ಚೀಟಿ ಪಡೆಯಲು ಕಾತುರದಿಂದ ಕಾಯುತ್ತಿದ್ದರು.
ಆದರೆ ವಿಧಾನಸಭೆ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಹೊಸ ರೇಷನ್ ಕಾರ್ಡ್ ವಿತರಣೆಯನ್ನು ಸ್ಥಗಿತ ಮಾಡಲಾಗಿತ್ತು. ಇದೀಗ ಸರ್ಕಾರ ಅರ್ಹ ಫಲಾನುಭವಿಗಳಿಗೆ ಹೊಸ ಪಡಿತರ ಚೀಟಿಗಳನ್ನು ಮುಂದಾಗಿದೆ.ಈ ಸುದ್ದಿ ಬಡವರಿಗೆ ಖುಷಿ ನೀಡಿದೆ.
ಇನ್ನು ಮುಂದಾದರೂ ಅವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಅಥವಾ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ಪಡೆಯಲು ಅನುಕೂಲವಾಗಿದೆ. ಅದರಂತೆ ಸರ್ಕಾರ ಜಾರಿಗೆ ತಂದಿರುವ ಅನೇಕ ಯೋಜನೆಗಳ ಲಾಭವು ಬಡ ಜನರಿಗೆ ಸಿಗಲಿದೆ.
ಕರ್ನಾಟಕದಲ್ಲಿ ಹೊಸ ರೇಷನ್ ಕಾರ್ಡ್