ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ (Pradhana Mantri Awas Yojana) ಸರ್ವರಿಗೂ ಸೂರು ಅಭಿಯಾನದ ಮೂಲಕ ಬಡವರಿಗೆ ಮನೆ ಹಂಚುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಫಲಾನುಭವಿಗಳು (Beneficiaries) ಕೇವಲ ಒಂದು ಲಕ್ಷ ರೂ. ಪಾವತಿಸಿ ಮನೆಯನ್ನು ಪಡೆಯಬಹುದು ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಏನಿದು ರಾಜ್ಯ ಸರ್ಕಾರದ ನಿರ್ಧಾರ?
ಈ ಹೊಸ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಪ್ರಕಾರ ಕರ್ನಾಟಕ ರಾಜ್ಯ ಸರ್ಕಾರ ಒಟ್ಟು 500 ಕೋಟಿ ಬಿಡುಗಡೆ ಮಾಡಲು ಒಪ್ಪಿದೆ, ಹಾಗಾಗಿ ಈಗ ಮನೆ ಪಡೆಯುವ ಫಲಾನುಭವಿಗಳು ಕೇವಲ 1 ಲಕ್ಷ ರೂಪಾಯಿ ಕಟ್ಟಿದರೆ ಸಾಕು ಉಳಿದ 3.5 ಲಕ್ಷ ರು.ಗಳನ್ನು ರಾಜ್ಯ ಸರ್ಕಾರವೇ ಭರಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವಸತಿ ಸಚಿವ ಜಮೀರ್ ಅಹಮದ್ ಖಾನ್, ಈ ಯೋಜನೆಯಡಿ ಮೊದಲ ಹಂತದಲ್ಲಿ 48,796 ಮನೆಗಳನ್ನು ಪೂರ್ಣಗೊಳಿಸಲು 500 ಕೋಟಿ ರೂ. ಬಿಡುಗಡೆ ಮಾಡಲು ಇಂದಿನ ಸಭೆಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ. ಉಳಿದ 1.30 ಸಾವಿರ ಮನೆಗಳನ್ನು ಮುಂದಿನ ಐದು ವರ್ಷಗಳಲ್ಲಿ ಹಂತಹಂತವಾಗಿ ಪೂರ್ಣಗೊಳಿಸಲು ಸಂಪುಟ ಸಭೆ ಸಮ್ಮತಿ ನೀಡಿದೆ ಎಂದರು.
ಪ್ರಧಾನ ಮಂತ್ರಿ ಆವಾಸ್ ಯೋಜನೆ:
ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 2015ರಲ್ಲಿ 1,80,253 ಮನೆಗಳು ಮಂಜೂರಾಗಿದ್ದವು. ಆದರೆ, 2015ರಿಂದ 2023ರ ವರೆಗೂ ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಡಿ ಒಂದೇ ಒಂದು ಮನೆಯನ್ನು ಕೊಡಲು ಸಾಧ್ಯವಾಗಿಲ್ಲ. 2015ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದ್ದಾಗ ಪ್ರತಿ ವರ್ಷವೂ ಒಂದಷ್ಟು ಮನೆಗಳಿಗೆ ಮಂಜೂರಾತಿ ನೀಡಲಾಗಿತ್ತು. 2018ರಿಂದ ಒಂದೇ ಒಂದು ಮನೆಯನ್ನು ಮಂಜೂರಾತಿ ನೀಡಲಾಗಿಲ್ಲ. ಆವಾಸ್ ಯೋಜನೆಯ ಪ್ರಕಾರ ಫಲಾನುಭವಿಗಳು 4.5 ಲಕ್ಷ ರೂ. ಪಾವತಿಸಬೇಕು. ಕೇಂದ್ರ ಸರಕಾರ 1.5 ಲಕ್ಷ ರೂ. ನೀಡುತ್ತದೆ, ರಾಜ್ಯ ಸರಕಾರ ಒಂದು ಲಕ್ಷ ರೂ. ನೀಡಬೇಕು. ಆದರೆ, ರಾಜ್ಯ ಸರ್ಕಾರ ಇದುವರೆಗೂ ತನ್ನ ಪಾಲಿನ ಹಣ ಬಿಡುಗಡೆ ಮಾಡಿಲ್ಲ. ಜತೆಗೆ ಹಲವಾರು ಫಲಾನುಭವಿಗಳು 4.5 ಲಕ್ಷ ರೂ. ಕಟ್ಟಲು ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ.
ಈ ಹಿಂದಿನ ನಿಯಮ ಏನಿತ್ತು?
ಈ ಯೋಜನೆಗೆ ಒಟ್ಟು 6,170 ಕೋಟಿ ರೂ. ಬೇಕಾಗಲಿದೆ. ಪ್ರತಿ ಮನೆ ನಿರ್ಮಾಣಕ್ಕೆ 7.5 ಲಕ್ಷ ರೂ. ವೆಚ್ಚವಾಗಲಿದೆ. ಇದರಲ್ಲಿ ರಾಜ್ಯ ಸರ್ಕಾರದಿಂದ ಸಾಮಾನ್ಯ ವರ್ಗದವರಿಗೆ 1.20, ಎಸ್ಸಿ, ಎಸ್ಟಿಗಳಿಗೆ 2 ಲಕ್ಷ ರೂ. ಸಹಾಯಧನ ಹಾಗೂ ಕೇಂದ್ರ ಸರ್ಕಾರದಿಂದ ಉಳಿದ ಸಹಾಯಧನ ಸೇರಿ ಒಟ್ಟು 3 ಲಕ್ಷ ರೂ. ಭರಿಸುವುದು. ಉಳಿದ 4.5 ಲಕ್ಷ ರೂ. ಹಣವನ್ನು ಫಲಾನುಭವಿಗಳು ಭರಿಸಬೇಕೆಂಬ ನಿಯಮ ಇತ್ತು.
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅರ್ಜಿ ಸಲ್ಲಿಸಲು ಈ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು
Tags
Govt.scheme