ಸರ್ಕಾರದ ಮತ್ತೊಂದು ಯೋಜನೆ !! ರಾಜ್ಯದ ಎಲ್ಲಾ ಮಹಿಳೆಯರಿಗೆ 2 ಲಕ್ಷ ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ :

ಸರ್ಕಾರದ ಮತ್ತೊಂದು ಯೋಜನೆ !!
ರಾಜ್ಯದ ಎಲ್ಲಾ ಮಹಿಳೆಯರಿಗೆ 2 ಲಕ್ಷ ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ :



 

  ಈ ಲೇಖನದಲ್ಲಿ ನಿಮಗೆ ತಿಳಿಸುವುದೇನೆಂದರೆ... ರಾಜ್ಯ ಸರ್ಕಾರವು ಮಹಿಳೆಯರಿಗೆ ಸಾಲ ಸೌಲಭ್ಯವನ್ನು ಒದಗಿಸಿ ಕೊಟ್ಟಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಸ್ತ್ರೀಶಕ್ತಿ ಸಂಘಟನೆಗಳಿಗೆ 2 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ (loan without interest) ಸೌಲಭ್ಯ ಒದಗಿಸಲಾಗುವುದು ಎಂದು ರಾಜ್ಯ ಸರ್ಕಾರ (state government) ಭರವಸೆ ನೀಡಿದೆ, ಮತ್ತು ಇದಕ್ಕಾಗಿ ರಾಜ್ಯ ಸರ್ಕಾರವು 70,427 ಕೋಟಿ ಹಣವನ್ನು ಮೀಸಲಿಟ್ಟಿದೆ. 

ಸ್ತ್ರೀ ಶಕ್ತಿ ಸಂಘಟನೆಗಳಿಗೆ ಎರಡು ಲಕ್ಷದವರೆಗೆ ಸಾಲ ಸೌಲಭ್ಯ :

ಈ ಯೋಜನೆಗಳು ಸ್ತ್ರೀಯರಲ್ಲಿ ಸರಿಯಾದ ಸಾಮಾಜಿಕ ಘನತೆಯನ್ನು ಒದಗಿಸುವ, ಕೌಶಲ್ಯ ವೃದ್ಧಿ ಹಾಗೂ ಉದ್ಯಮಶೀಲತೆಯ ಗುಣಮಟ್ಟ ಹೆಚ್ಚಿಸುವ ಗುರಿಯೊಂದಿಗೆ ಸ್ವಲಂಬಿಯಾಗಿ ಬದುಕಲು ಮಾರ್ಗಗಳನ್ನು ಖಚಿತಪಡಿಸಿಕೊಳ್ಳುತ್ತದೆ. ಇದೀಗ ರಾಜ್ಯ ಸರ್ಕಾರ ಮಹಿಳೆಯರಿಗೆ ಮತ್ತೊಂದು ಸಂತಸದ ಸುದ್ದಿಯನ್ನು ನೀಡಿದೆ. ಸ್ತ್ರೀಶಕ್ತಿ(Stree Shakti) ಸಂಘಟನೆಗಳಿಗೆ 2 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ (Without Interest Loan) ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

whatss

              ಈ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ರಾಜ್ಯ ಸರ್ಕಾರವು ಮಹಿಳಾ ಕಲ್ಯಾಣ ಕಾರ್ಯಕ್ರಮಗಳಿಗೆ 70,427 ಕೋಟಿ ಹಣವನ್ನು ಮೀಸಲಿರಿಸಿದೆ. ರಾಜ್ಯದ ಒಟ್ಟು 1 ಲಕ್ಷದ 65 ಸಾವಿರ ಸ್ತ್ರೀ ಶಕ್ತಿ ಗುಂಪುಗಳಿಗೆ ತಲಾ 25 ಸಾವಿರ ರೂ. ಆವರ್ತ ನಿಧಿ, ಸ್ತ್ರೀ ಶಕ್ತಿ ಸಂಘಟನೆಗಳಿಗೆ 2 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕಾರ್ ತಿಳಿಸಿದ್ದಾರೆ.
ರಾಜ್ಯದ ಮಹಿಳೆಯರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ ‘ಸ್ತ್ರೀಶಕ್ತಿ’ ಯೋಜನೆಯನ್ನು  2000-01 ನೇ ವರ್ಷದಿಂದ ಜಾರಿಗೊಳಿಸಲಾಯಿತು. ರಾಜ್ಯದಲ್ಲಿ 176 ತಾಲೂಕುಗಳ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸ್ತ್ರೀಶಕ್ತಿ ಮಹಿಳೆಯರ ಗುಂಪುಗಳನ್ನು ರಚಿಸಲಾಯಿತು.

 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು