ಡಿ.26ರಿಂದ ಆರಂಭವಾಗುವ "ಯುವನಿಧಿ: ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆ, ಅರ್ಹತೆ ಸಂಪೂರ್ಣ ಮಾಹಿತಿ ಇಲ್ಲಿದೆ....

ಡಿ.26ರಿಂದ ಆರಂಭವಾಗುವ "ಯುವನಿಧಿ: ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆ, ಅರ್ಹತೆ ಸಂಪೂರ್ಣ ಮಾಹಿತಿ ಇಲ್ಲಿದೆ....



 
  
              ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಭರವಸೆ ಯುವನಿಧಿಗೆ' ಡಿಸೆಂಬರ್ -26 ರಿಂದ ನೊಂದ್ನೈ ಆರಂಭವಾಗಲಿದೆ. 2023-24ನೇ ಸಾಲಿನಲ್ಲಿ ಯಾವುದೇ ವೃತ್ತಿಪರ ಕೋರ್ಸ್, ಪದವಿ, ಡಿಪ್ಲೋಮ ಉತ್ತೀರ್ಣರಾಗಿ 6 ತಿಂಗಳಲ್ಲಿ ಉದ್ಯೋಗ ಸಿಗದವರಿಗೆ ಈ ಯೋಜನೆ ಅನ್ವಯವಾಗಲಿದೆ. ಮುಂದಿನ 24 ತಿಂಗಳು ಪದವೀಧರರಿಗೆ ಮಾಸಿಕ ರೂ 3000 ಡಿಪ್ಲೊಮಾ ಮುಗಿಸಿದವರಿಗೆ ಮಾಸಿಕ 1500 ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. ಉದ್ಯೋಗ ಸಿಕ್ಕಿದ ಕೂಡಲೇ ಈ ಸೌಲಭ್ಯ ಸ್ಥಗಿತಗೊಳ್ಳಲಿದೆ.

ಏನಿದು ಯುವನಿಧಿ? ಯಾರಿಗೆ ಸಿಗುತ್ತೆ ಹಣ?

ಯುವನಿಧಿ ಯೋಜನೆಯ ಫಲಾನುಭವಿಯಾಗುವುದಕ್ಕೆ ಇರಬೇಕಾದ ಅರ್ಹತೆ ಮತ್ತು ಸಿಗುವ ಭತ್ಯೆ ವಿವರ ಹೀಗಿದೆ.

2022-23ನೇ ಸಾಲಿನಲ್ಲಿ ಉತ್ತೀರ್ಣರಾಗಿ 6 ತಿಂಗಳು ಉದ್ಯೋಗ ಸಿಗದೇ ಇರುವವರಿಗೆ ಈ ಯೋಜನೆಯ ಲಾಭ ಸಿಗಲಿದೆ.

ವೃತ್ತಿಪರ ಕ್ರೊಸ್ ಒಳಗೊಂಡು  ಎಲ್ಲ ಪದವೀಧರರಿಗೆ ಪ್ರತಿ ತಿಂಗಳು 3,000 ರೂ ನೀಡಲಾಗುತ್ತದೆ.

ಡಿಪ್ಲೊಮಾ ಪದವೀಧರರಿಗೆ ಮಾಸಿಕ 1,500 ರೂಪಾಯಿ ನಿರುದ್ಯೋಗ ಭತ್ಯೆ ಸಿಗಲಿದೆ.

ಈ ಭತ್ಯೆಯು ಉದ್ಯೋಗ ಸಿಗುವವರಿಗೆ ಅಥವಾ ಗರಿಷ್ಟ 2 ವರ್ಷಗಳ ಅವಧಿಗೆ ಸಿಗಲಿದೆ.

ಯಾವುದಾದರು ಉದ್ಯೋಗ ಸಿಕ್ಕಿದ ಕೂಡಲೇ ಈ ಸವಲತ್ತು ಸ್ಥಗಿತಗೊಳ್ಳಲಿದೆ.



ಅರ್ಜಿ ಸಲ್ಲಿಸಲು ಮಾನದಂಡಗಳು:

ಕರ್ನಾಟಕದಲ್ಲಿ ವಾಸಿಸುವ ಕನ್ನಡಿಗ ಅಭ್ಯರ್ಥಿಗಳಿಗೆ ಮಾತ್ರ. 

ವಾಸವಿರುವ ವಿದ್ಯಾರ್ಥಿ ಎಂದರೆ ಕರ್ನಾಟಕದಲ್ಲಿ ಕನಿಷ್ಠ 6 ವರ್ಷಗಳವರೆಗೆ ಪದವಿ/ಡಿಪ್ಲೊಮಾದವರಿಗೆ ಅಧ್ಯಯನ ಮಾಡಿದವರು. 6 ವರ್ಷಗಳ ವಾಸವಿರುವುದನ್ನು ಈ ಕೆಳಗಿನಂತೆ ಪರಿಶೀಲಿಸಲಾಗುತ್ತದೆ.

SSLC ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ ಮತ್ತು ಪದವಿ ಪ್ರಮಾಣಪತ್ರ/ಅಂಕಪಟ್ಟಿಗಳು ಅಥವಾ

SSLC ಅಂಕಪಟ್ಟಿ ಪಿಯುಸಿ ಅಂಕಪಟ್ಟಿ ಡಿಪ್ಲೋಮ ಪ್ರಮಾಣಪತ್ರ/ಅಂಕಪಟ್ಟಿ ಅಥವಾ 

ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ನೋಂದಣಿ ಸಂಖ್ಯೆ ಮತ್ತು ಪದವಿ ಪ್ರಮಾಣಪತ್ರ ಅಥವಾ 

ಪಡಿತರ ಚೀಟಿ ನೀಡಿದ ದಿನಾಂಕ ಮತ್ತು ಪದವಿ ಪ್ರಮಾಣಪತ್ರ ನೀಡಿದ SSLC ಅಂಕಪಟ್ಟಿಯನ್ನು ಸಹ ವಾಸಸ್ಥಳ ಪರಿಶೀಲನೆಗಾಗಿ .ಪರಿಗಣಿಸುವುದು.

ಅಭ್ಯರ್ಥಿಯ ಪದವಿ/ಡಿಪ್ಲೊಮಾ ಹೊಂದಿರುವ ಸ್ಥಿತಿಯ ಬಗ್ಗೆ ಪರಿಶೀಲಿಸಲು National of Open Schooling )ನಲ್ಲಿ ಅಪ್ಲೋಡ್ ಮಾಡಲಾದ ಅಭ್ಯರ್ಥಿಗಳ ಪದವಿ/ಡಿಪ್ಲೊಮಾ ಪ್ರಮಾಣಪತ್ರ ಅಥವಾ ತಾತ್ಕಾಲಿಕ ಪದವಿ/ಡಿಪ್ಲೊಮಾ ಪ್ರಮಾಣಪತ್ರಗಳನ್ನು ಪರಿಗಣಿಸಲಾಗುವುದು.

ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳುವ ಮೊದಲು ಡಿಜಿಲಾಕರ್ ನಲ್ಲಿ ಖಾತೆಯನ್ನು ಸೃಜಿಸುವ ಮೂಲಕ ತಮ್ಮ National Academic Depository ಪ್ರಮಾಣ ಪತ್ರವನ್ನು ಪಡೆದಿರುವುದನ್ನು ಖಚಿತಪಡಿಸಿಕೊಳ್ಳತಕ್ಕದ್ದು.

whatss

 

ಯುವನಿಧಿ ಯೋಜನೆಯ ಲಾಭ ಯಾರಿಗೆ ಸಿಗುವುದಿಲ್ಲ?

ಉನ್ನತ ವ್ಯಾಸಂಗಕ್ಕೆ ದಾಖಲಾಗುವವರು ಮತ್ತು ವಿದ್ಯಾಭ್ಯಾಸ ಮುಂದುವರಿಸುವವರು.

ಯಾವುದೇ ಅಪ್ರೆಂಟಿಸ್ ವೇತನ ಪಡೆಯುತ್ತಿರುವವರು.

ಸರಕಾರಿ / ಖಾಸಗಿ ಉದ್ಯೋಗ ಪಡೆದಿರುವವರು ಈ ಯೋಜನೆಗೆ ಅರ್ಜಿ ಸಲ್ಲಿಸುವಂತಿಲ್ಲ.

ಸರ್ಕಾರದ ನಾನಾ ಯೋಜನೆಗಳಡಿ ಅಥವಾ ಬ್ಯಾಂಕ್ ಸಾಲ ಪಡೆದು ಸ್ವಯಂ ಉದ್ಯೋಗ ಶುರು ಮಾಡಿದವರಿಗೂ ಇಲ್ಲ.

ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಾಲೆಗಳು:

ಮತದಾರರ ಗುರುತಿನ ಚೀಟಿ , ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ 

ಬ್ಯಾಂಕ್ ಖಾತೆ ಮಾಹಿತಿ ಸ್ಪಷ್ಟವಾಗಿರಬೇಕು.

ಪದವಿ ಅಂಕಪಟ್ಟಿ ಹಾಗೂ ವಿಶ್ವವಿದ್ಯಾಲಯ ಪದವಿ ಪ್ರಮಾಣಪತ್ರ ಕಡ್ಡಾಯ (ಅದು 2023ರದ್ದೇ ಆಗಿರಬೇಕು. ಶಿಕ್ಷಣ ಮುಗಿಸಿ ಆರು ತಿಂಗಳು ಆಗಿರಬೇಕು)

ಡಿಪ್ಲೋಮಾ ಅಂಕಪಟ್ಟಿ ಹಾಗೂ ಪ್ರಮಾಣಪತ್ರ.(ಅದು 2023ರದ್ದೇ ಆಗಿರಬೇಕು. ಶಿಕ್ಷಣ ಮುಗಿಸಿ ಆರು ತಿಂಗಳು ಆಗಿರಬೇಕು)


ಯುವನಿಧಿ ಯೋಜನೆಗೆ ಎಲ್ಲಿ ಅರ್ಜಿ ಸಲ್ಲಿಸಬೇಕು?

ಯುವನಿಧಿಗೆ ಅರ್ಹತೆ ಹೊಂದಿರುವ ಯುವಕ ಯುವತಿಯರು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.

 





          

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು