ವಾಹನ ಖರೀದಿಸಲು 4 ಲಕ್ಷ ಸಹಾಯಧನ, ಅರ್ಜಿ ಆಹ್ವಾನ ।। ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ತಿಳಿಯಿರಿ:

ವಾಹನ ಖರೀದಿಸಲು 4 ಲಕ್ಷ ಸಹಾಯಧನ, ಅರ್ಜಿ ಆಹ್ವಾನ ।। ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ತಿಳಿಯಿರಿ:



 
            ಎಲ್ಲರಿಗು ನಮಸ್ಕಾರ, ನೀವು ವಾಹನ ಚಾಲಕರಾ? ಆಟೋ ರಿಕ್ಷಾ, ಟ್ಯಾಕ್ಸಿ ಸರಕು ವಾಹನ ಖರೀದಿಸಲು ನಿಮಗೆ ಸರ್ಕಾರದ ಸಬ್ಸಿಡಿ ಹಣ ಪಡೆಯಬೇಕೆ? ಹಾಗಿದ್ದರೆ, ನಿಮಗೆ ನಾವು ಇಲ್ಲಿ ಸಂಪೂರ್ಣ ಮಾಹಿತಿ ನೀಡಿದ್ದೇವೆ. ಈ ಲೇಖನವನ್ನು ಓದಿ ಹಾಗೂ ಸರ್ಕಾರದ ಸಹಾಯಧನ ಪಡೆದು ನಿಮ್ಮ ವೃತ್ತಿ ಜೀವನವನ್ನು ಯಶಸ್ವಿಯಾಗಿಸಿ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವ ಲಿಂಕ್ ಕೆಳಗೆ ನೀಡಲಾಗಿದೆ.

ಯಾರು ಅರ್ಜಿ ಸಲ್ಲಿಸಬಹುದು?

        ಯೋಜನೆಗೆ ಈ ಕೆಳಗಿನ ನಿಗಮಗಳ ವ್ಯಾಪ್ತಿಯಲ್ಲಿ ಬರುವ ಸಮುದಾಯದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

➡  ಬಿ ಆರ್ ಅಂಬೇಡ್ಕರ್ ಅಭಿವೃದ್ಡಿ ನಿಗಮ, 
➡  ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ 
➡  ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ 
➡  ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ 
➡  ಪರಿಶಿಷ್ಟ ಜಾತಿ ಮತ್ತು ಅಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ 
➡  ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ 

whatss

ದಾಖಲೆಗಳು :

⭐ ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ ಪ್ರಮಾಣಪತ್ರ 
⭐ ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣಪತ್ರ 
⭐ ಆಧಾರ್ ಕಾರ್ಡ್ ಪ್ರತಿ ( ನಿವಾಸದ ಪುರಾವೆ)
⭐ ವಾಹನದ ಚಾಲನಾ ಪರವಾನಗಿ Driving Licence)
⭐ ಬ್ಯಾಂಕ್ ಪಾಸ್ ಬುಕ್ ಪ್ರತಿ 
⭐ ವಾಹನದ ಅಂದಾಜು ದರಪಟ್ಟಿ 
⭐ ಸ್ವಯಂ ಘೋಷಣೆ ಪತ್ರ 
⭐ ಫಲಾನುಭವಿಯ ಇತ್ತೀಚಿನ 2 ಪಾಸ್ಪೋರ್ಟ್ ಅಳತೆಯ ಭಾವಚಿತ್ರ 
⭐ ಅರ್ಜಿದಾರರ ಮತ್ತು ಕುಟುಂಬದ ಸದಸ್ಯರು ವಾಹನ ಖರೀದಿಗೆ ರಾಜ್ಯ ಸರ್ಕಾರದ ಯಾವುದೇ ಯೋಜನೆಯಡಿ ಸಾಲ ಸೌಲಭ್ಯ ಪಡೆದಿಲ್ಲದಿರುವ ಬಗ್ಗೆ ಜಿಲ್ಲಾ ವ್ಯವಸ್ಥಾಪಕರಿಂದ ಧೃಡೀಕರಣ ಪತ್ರ 
⭐ ಈ ಯೋಜನೆಯಡಿ ಪಡೆದ ವಾಹನವನ್ನು ಯಾರಿಗೂ ಪರಭಾರೆ ಮಾಡದಿರುವ ಬಗ್ಗೆ ಧೃಡೀಕರಣ ಪತ್ರ 
⭐ ಅರ್ಜಿದಾರರು ನಿರುದ್ಯೋಗಿ ಆಗಿರಬೇಕು.( ಸ್ವಯಂ ಘೋಷಣಾ ಪತ್ರ ಸಲ್ಲಿಸುವುದು).

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-12-2023

ನಿಯಮಗಳು ಮಂಜೂರಾತಿ ಪಡೆದ ಫಲಾನುಭವಿಯು ಅನರ್ಹರೆಂದು ಕಂಡು ಬಂದಲ್ಲಿ ಮಂಜೂರಾತಿಯನ್ನು ಯಾವುದೇ ಹಂತದಲ್ಲಿ ರದ್ದು ಪಡಿಸಲಾಗುತ್ತದೆ.


  crossorigin="anonymous">

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು