ಕರ್ನಾಟಕ ಅರಣ್ಯ ಇಲಾಖೆಯ 540 ರಕ್ಷಕರ ಹುದ್ದೆಗೆ ಅಧಿಸೂಚನೆ ; ಅರ್ಜಿಗೆ ಸಂಪೂರ್ಣ ಮಾಹಿತಿ ಇಲ್ಲಿದೆ:

ಕರ್ನಾಟಕ ಅರಣ್ಯ ಇಲಾಖೆಯ 540 ರಕ್ಷಕರ ಹುದ್ದೆಗೆ ಅಧಿಸೂಚನೆ ; ಅರ್ಜಿಗೆ ಸಂಪೂರ್ಣ ಮಾಹಿತಿ ಇಲ್ಲಿದೆ:



 
            ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 540 (506 ಸರ್ಕಾರವು ಅನುಮತಿಸಿದ ಹುದ್ದೆ +34ಹಿಂದಿನ ಅಧಿಸೂಚನೆಯಲ್ಲಿನ ಹಿಂಬಾಕಿ ಹುದ್ದೆಗಳು) ಗಸ್ತು ಅರಣ್ಯ ಪಾಲಕ (ವೃಂದ ಮತ್ತು ನೇಮಕ್ತಿ ನಿಯಮಗಳಂತೆ 'ಅರಣ್ಯ ರಕ್ಷಕ) ಗ್ರೂಪ್ 'ಸಿ' ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಅರಣ್ಯ ರಕ್ಷಕರ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಹೇಗಿರುತ್ತದೆ?

ಅರಣ್ಯ ರಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಿದವರ ವಿದ್ಯಾರ್ಹತೆ ಅಂಕಗಳ ಆಧಾರದಲ್ಲಿ ಮೀಸಲಾತಿಗೆ ಅನುಗುಣವಾಗಿ ಮತ್ತು ವೃತ್ತವಾರು ಹುದ್ದೆಗಳಿಗೆ ಅನುಗುಣವಾಗಿ 1:20 ಅನುಪಾತದಲ್ಲಿ ದೇಹದಾಢ್ಯತೆ,  ದೈಹಿಕ ತಾಳ್ವಿಕೆ ಮತ್ತು ದಹಿಕ ಕಾರ್ಯ ಸಮರ್ಥತೆ ಪರೀಕ್ಷೆಗಳಿಗೆ ಅರ್ಹತಾ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ನಿಗದಿಪಡಿಸಿದ ದಿನಾಂಕದಂದು ಈ ಪರೀಕ್ಷೆಗಳಿಗೆ ಪ್ರವೇಶ ಪತ್ರದೊಂದಿಗೆ ಹಾಜರಾಗಬೇಕು. ಈ ಮಾರ್ಗದಲ್ಲಿ ಆಯ್ಕೆ ಪ್ರಕ್ರಿಯೆಗಳು ಇರುತ್ತವೆ.

ಅರಣ್ಯ ರಕ್ಷಕರ ಹುದ್ದೆಗೆ ಅರ್ಹತೆ:
ಅಧಿಸೂಚನೆ ದಿನಾಂಕದೊಳಗೆ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಪಾಸ್ ಮಾಡಿರಬೇಕು. ಅರ್ಜಿ ಸಲ್ಲಿಕೆ ವೇಳೆ ಆನ್ಲೈನ್ ನಲ್ಲಿ ಅಂಕಪಟ್ಟಿ ಅಪ್ಲೋಡ್ ಮಾಡಬೇಕಿರುತ್ತದೆ.


whatss


ವಯಸ್ಸಿನ ಮಿತಿ :
ಅಧಿಸೂಚನೆಯ ದಿನಾಂಕಕ್ಕೆ ಅಭ್ಯರ್ಥಿಯು ಕನಿಷ್ಠ 18 ವರ್ಷ ಪೂರೈಸಿರಬೇಕು. ಗರಿಷ್ಟ ವಯೋಮಿತಿ SC /ST /CAT -1  ಅಭ್ಯರ್ಥಿಗಳಿಗೆ 32 ವರ್ಷ, OBC ಅಭ್ಯರ್ಥಿಗಳಿಗೆ 30 ವರ್ಷ,  ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 27 ವರ್ಷ, ನಿಗದಿಪಡಿಸಲಾಗಿದೆ.


ವೇತನ ಶ್ರೇಣಿ:
ಅರಣ್ಯ ರಕ್ಷಕ ಹುದ್ದೆಗಳಿಗೆ ವೇತನ ಶ್ರೇಣಿ : ರೂ 18,600 - 32,600 ರವರೆಗೆ ನೀಡಲಾಗುತ್ತದೆ. ಅಲ್ಲದೆ ಪಿಂಚಣಿ ಸೌಅಲಭ್ಯ, ವಿಶೇಷ ಭತ್ಯೆಗಳನ್ನು ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು :
ಅರ್ಜಿ ಸ್ವೀಕಾರ ದಿನಾಂಕ : 01/12/2023
ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕ : 30/12/2023

ಉದ್ಯೋಗ ಸ್ಥಳ - ಕರ್ನಾಟಕ ರಾಜ್ಯದಾದ್ಯಂತ 
ಪ್ರದೇಶ               - ಕರ್ನಾಟಕ
ಅಂಚೆ ಸಂಖ್ಯೆ    - 560003


 

ನಮ್ಮಟ್ಯೂಬ್ ಚಾನಲ್ ಮೂಲಕ ಅರ್ಜಿ ಸಲ್ಲಿಸಿಕೊಡಲಾಗುವುದು....ಅರ್ಜಿ ಸಲ್ಲಿಸಲು ಸಂಪರ್ಕಿಸಿ.

Contact Number : 7795063340/-
Whats Numeber : 7795518340/

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು