ನಮಸ್ಕಾರ ಸ್ನೇಹಿತರೆ.......
2023 ರ ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ಹೇಳಿತ್ತು. ಅದರಂತೆ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಪ್ರಚಂಡ ಬಹುಅಂತದಿಂದ ಅಧಿಕಾರಕ್ಕೆ ಬಂದಿದೆ.
ಸಿದ್ಧರಾಮಯ್ಯನವರು ಮುಖ್ಯಮಂತ್ರಿಯಾದ ನಂತರ ಗೃಹಲಕ್ಷ್ಮಿ ಯೋಜನೆ, ಅನ್ನಭಾಗ್ಯ ಯೋಜನೆ, ಶಕ್ತಿ ಯೋಜನೆ ಗೃಹಾಜ್ಯೋತಿ ಯೋಜನೆಗಳನ್ನು ಐದರಲ್ಲಿ 4 ಜಾರಿ ಮಡಿಲಾಗಿದೆ.
ಯುವನಿಧಿ ಯೋಜನೆ :
ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅದರಲ್ಲೂ ನಿರುದ್ಯೋಗಿಗಳಿಗೆ ಅನುಕೂಲವಾಗಲಿರುವ ಯುವನಿಧಿ ಯೋಜನೆಯನ್ನು ಜಾರಿ ಮಾಡಲು ಮುಹೂರ್ತ ನಿಗದಿಯಾಗಿದ್ದು ಅದರ ಸಂಪೂರ್ಣ ಮಾಹಿತಿ ಇಲ್ಲಿದೆ. ಸರ್ಕಾರದ ಯೋವಾನಿಧಿ ಯೋಜನೆಯನ್ನು ಜಾರಿ ಮಾಡಲು ಈಗ ಮುಂದಾಗಿದೆ.
ಮುಖ್ಯಮಂತ್ರಿಗಳು ನೀಡಿದ ಮಾಹಿತಿ:
"ನಮ್ಮ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಡಿದ 143 ಕಾರ್ಯಕ್ರಮಗಳಲ್ಲಿ 83 ಕ್ಕೆ ಆದೇಶ ಹೊರಡಿಸಿ, ಜಾರಿಗೊಳಿಸಲಾಗುತ್ತಿದೆ. 4 ಗ್ಯಾರಂಟಿ ಯೋಜನೆಗಳು ಈಗಾಗಲೇ ಜಾರಿಯಾಗಿವೆ....ಯುವನಿಧಿ ಜನೇವರಿಯಲ್ಲಿ ಜಾರಿಗೆ ಬರಲಿದೆ" ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ನಮ್ಮ ಆಡಳಿತ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸೀಮಿತವಾಗದೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ಕೊಟ್ಟು ಕರ್ನಾಟಕ ಅಭಿವೃದ್ಧಿ ಮಾದರಿ ಆಡಳಿತವೆಂಬ ನವ ಕಲ್ಪನೆಗೆ ನಾಂದಿಯಾಗಿದ್ದೇವೆ. ನಮ್ಮ ಸಾಧನೆಗಳು ಸದನದ ಒಳಗೆ ಮತ್ತು ಹೊರಗೆ ಹಾಳೆಗಳಿಗೆ ಸೀಮಿತವಾಗಿರದೆ ಜನರ ಬದುಕಲ್ಲಿ ಪ್ರತಿಫಲಿಸುತ್ತಿವೆ ಎಂದು ಸಿಎಂ ಸಿದ್ಧರಾಮಯ್ಯನವರು ತಮ್ಮ ಸರ್ಕಾರ ಅಭಿವೃದ್ಧಿ ಪರ ಇದೆ ಎಂದು ಮಾಹಿತಿ ನೀಡಿದ್ದಾರೆ.
ಯುವನಿಧಿ ಅರ್ಜಿ ಸಲ್ಲಿಸಲು ದಾಖಲಾತಿಗಳು:
ಆಧಾರ್ ಕಾರ್ಡ್
ಬ್ಯಾಂಕ್ ಪಾಸ್ ಬುಕ್
ಕಳೆದ ವರ್ಷದ ಅಂಕ ಪಟ್ಟಿ (ಪದವಿ ಅಥವಾ ಡಿಪ್ಲೊಮಾ ಪದವಿ)
ಅರ್ಜಿಯನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ ನಲ್ಲೆ ಸಲ್ಲಿಸಬಹುದು.
Tags
Govt.scheme