ಈ ರೀತಿ ಮಾಡಿದರೆ ಹಣ ಇಲ್ಲ....!
ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಅನೇಕ ಹೊಸ ಹೊಸ ಸೂಚನೆಗಳನ್ನು ಜಾರಿಗೆ ತರುತ್ತಿದ್ದು ಅದರಲ್ಲಿ ಇದೀಗ ಕಳೆದ ತಿಂಗಳು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯದೇ ಇರುವ ಮಹಿಳೆಯರಿಗೆ ಸರ್ಕಾರದಿಂದ ಹೊಸ ಸೂಚನೆ ತಿಳಿಸಲಾಗುತ್ತಿದೆ.
ಇದುವರೆಗೂ ಗೃಹಾಲಕ್ಷ್ಮಿ ಯೋಜನೆಯಡಿಯಲ್ಲಿ ಹಣ ಪಡೆಯುವುದಕ್ಕೆ ಒಂದು ಕೋಟಿ 17 ಲಕ್ಷದ ಅರ್ಜಿ ಸಲ್ಲಿಕೆಯಾಗಿದ್ದು ಈಗಾಗಲೇ ಅವುಗಳಲ್ಲಿ ಒಂದು ಕೋಟಿ 10 ಲಕ್ಷದಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಿದೆ.
ಹಣ ಜಮಾ ಮಾಡಲು ವಿಶಿಷ್ಟ ಕ್ರಮ :
ಕರ್ನಾಟಕ ಸರ್ಕಾರವು ಮುಖ್ಯವಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಸಿದರು ಹಣ ಜಮಾ ಆಗದೆ ಇರುವ ಮಹಿಳೆಯರಿಗೆ ಅವರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲು ವಿಶಿಷ್ಟ ಕ್ರಮವನ್ನು ಕೈಗೊಂಡಿದೆ ಎಂದು ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದರು. ಸರ್ಕಾರವು ಕೈಗೊಂಡ ಹಲವಾರು ಕ್ರಮಗಳಲ್ಲಿ ಮೊದಲನೆಯದು ಏನೆಂದರೆ ಮುಖ್ಯವಾಗಿ ಅಂಗನವಾಡಿ ಕಾರ್ಯಕರ್ತೆಯರು ನಿಮಗೆ ಗೃಹಲಕ್ಷ್ಮಿ ಯೋಜನೆ ಹಣ ಬಾರದೆ ಇದ್ದರೇ ಸಹಾಯ ಮಾಡಲಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮಾ ಆಗದೆ ಇದ್ದರೆ ಅಂಗನವಾಡಿ ಕಾರ್ಯಕರ್ತೆಯರು ಆ ಜವಾಬ್ದಾರಿಯನ್ನು ವಹಿಸಿಕೊಂಡು ನಿಮ್ಮ ಬ್ಯಾಂಕ್ ಖಾತೆಗೆ ಹಣ ಬರುವಂತೆ ಮಾಡುತ್ತಾರೆ. ಅಂಗನವಾಡಿ ಸಹಾಯಕಿಯರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿಯಲ್ಲಿರುವವರು ವರ್ಗಾವಣೆಗಾಗಿ ಶ್ರಮವಿಸುತ್ತಾರೆ ಇದರೊಂದಿಗೆ ಮಹಿಳೆಯರು ನಿಮ್ಮ ಬ್ಯಾಂಕ್ ಖಾತೆಯಲ್ಲಿ ಯಾವುದೇ ಸಮಸ್ಯೆಗಳಿದ್ದರೂ ಸಹ ಅವುಗಳನ್ನು ನಿಮ್ಮ ಅಂಗನವಾಡಿ ಕಾರ್ಯಕರ್ತೆಯರ ಹತ್ತಿರ ತಿಳಿಸುವುದು ಮುಖ್ಯವಾಗಿರುತ್ತದೆ.
ಗಂಡನ ಖಾತೆಗೆ ಹಣ ಜಮೆ!!
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಬ್ಯಾಂಕ್ ಖಾತೆಯಲ್ಲಿ ಏನಾದರೂ ಸಮಸ್ಯೆಗಳಿದ್ದರೆ ಆ ಹಣವನ್ನು ಅವರ ಪತಿಯ ಬ್ಯಾಂಕ್ ಖಾತೆಗೆ ಜಮೆ ಮಾಡಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ಹಾಗಾಗಿ ನೀವೇನಾದರೂ ನಿಮ್ಮ ಅಕೌಂಟ್ಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿಲ್ಲ ಎಂದು ಯೋಚಿಸುತ್ತಿದ್ದರೆ ಒಂದೊಮ್ಮೆ ನಿಮ್ಮ ಪತಿಯ ಅಕೌಂಟ್ ಅನ್ನು ಸಹ ಚೆಕ್ ಮಾಡಿ ಇದರಿಂದ ಯಾವ ಬ್ಯಾಂಕ್ ಖಾತೆಗೆ ಹಣ ಬಂದಿದೆ ಎಂಬುದನ್ನು ನೀವು ಸುಲಭವಾಗಿ ತಿಳಿದುಕೊಳ್ಳಬಹುದು.
ಹೀಗೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಇನ್ನೂ ಹಣ ಬರದಿದ್ದರೆ ಆ ಹಣವನ್ನು ಸಂಪೂರ್ಣವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುವುದಕ್ಕಾಗಿ ಕೆಲವೊಂದು ಉಪಕ್ರಮಗಳನ್ನು ಕೈಗೊಂಡಿದ್ದು ಆ ಉಪಕ್ರಮಗಳು ಈ ಲೇಖನದಲ್ಲಿದೆ ಎಂದು ಹೇಳಬಹುದಾಗಿದೆ..
Tags
Govt.scheme