ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಹೊಸ ಅಧಿಸೂಚನೆ ಪ್ರಕಟವಾಗಿದೆ. ರಾಜ್ಯದ ಪ್ರಾಥಮಿಕ & ಪ್ರೌಢಶಾಲೆಗಳಿಗೆ ಖಾಲಿ ಇರುವ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ (CRP), ಕ್ಷೇತ್ರ ಸಂಪನ್ಮೂಲ ವ್ಯಕ್ತಿ (BRP), & ತಾಂತ್ರಿಕ ಸಹಾಯಕರು ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ.
ಶೈಕ್ಷಣಿಕ ಅರ್ಹತೆ:
ರಾಜ್ಯದ ಸರ್ಕಾರೀ ಪ್ರಾಥಮಿಕ & ಪ್ರೌಢಶಾಲೆಗಳಲ್ಲಿ ಕನಿಷ್ಠ 10 ವರ್ಷಗಳ ಕಾಲ ಶಿಕ್ಷಕರಾಗಿ ಕಾರ್ಯ ನಿರ್ವಹಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
ಅರ್ಜಿ ಹಾಕುವ ವಿಧಾನ
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 18/12/2023 ರಿಂದ 30/12/2023 ರವರೆಗೆ ಶಿಕ್ಷಕರು EEDC ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಶುಲ್ಕ:
💨 ಅರ್ಜಿ ಶುಲ್ಕ ಇರುವುದಿಲ್ಲ.
ವೇತನ :
👉 ರಾಜ್ಯ ಸರ್ಕಾರದ ನಿಯಮಾವಳನ್ವಯ
ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಡಿಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ವಯೋಮಿತಿ:
⇾ ಗರಿಷ್ಟ ಅಂದರೆ 55 ವರ್ಷದವರೆಗೂ ಮಾತ್ರ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ.
ಪ್ರಮುಖ ದಿನಾಂಕಗಳು:
👉 ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ : 18/12/2023
👉 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 30/12/2023
Tags
Jobs