ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2024: ಅರ್ಜಿ ಸಲ್ಲಿಸಲು ಬೇಕಾದ ಸಂಪೂರ್ಣ ವಿವರ ತಿಳಿಯಿರಿ:

ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2024: ಅರ್ಜಿ ಸಲ್ಲಿಸಲು ಬೇಕಾದ ಸಂಪೂರ್ಣ ವಿವರ ತಿಳಿಯಿರಿ:



 
               ಯಾದಗಿರಿ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ಜವಾನ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ಹುದ್ದೆ: ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಜವಾನ

ಕರ್ತವ್ಯ ಸ್ಥಳ: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಯಾದಗಿರಿ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿ ಇರುವ ಹುದ್ದೆಗಳು: ಒಟ್ಟು 30 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:

💨  ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 16, 2024
💨  ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 15, 2024
💨  ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಫೆಬ್ರವರಿ 16, 2024

ಅರ್ಹತೆ:

👉  ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೊಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

👉 ಜೊತೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಶೀಘ್ರಲಿಪಿ ಮತ್ತು ಬೆರಳಚ್ಚು ಅಥವಾ ಡಿಪ್ಲೊಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.

ಬೆರಳಚ್ಚುಗಾರರು:

👉 ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೊಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. 

👉 ಜೊತೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಬೆರಳಚ್ಚು ಅಥವಾ ಡಿಪ್ಲೊಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.


whatss
 

ಜವಾನರು:

       ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಆಯ್ಕೆ ವಿಧಾನ:

ಶೀಘ್ರಲಿಪಿಗಾರ, ಬೆರಳಚ್ಚುಗಾರ : ಹುದ್ದೆಗೆ ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಬೆರಳಚ್ಚು ಯಂತ್ರ/ ಗಣಕಯಂತ್ರದಲ್ಲಿ ಬೆರಳಚ್ಚು ಮಾಡಿಸಿ ಅರ್ಹತಾ ಪರೀಕ್ಷೆ ನಡೆಸಲಾಗುವುದು.

ಜವಾನ: ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಸಾಮಾನ್ಯ ವರ್ಗದ ಅಭ್ಯರ್ಥಿಗಳು – ರೂ. 200
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 100
• ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು