ನಮಸ್ಕಾರ ಸ್ನೇಹಿತರೆ.......
ಬಿಎಂಟಿಸಿ ಯಿಂದ ಉಚಿತ ಲಘು, ಭಾರಿ ವಾಹನ ಚಲನ ತರಬೇತಿ ಅರ್ಜಿ ಸಲ್ಲಿಕೆ ಪ್ರಾರಂಭವಾಗಿರುವ ಕುರಿತು ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಲಾಗಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಕೇಂದ್ರ ಕಚೇರಿ ಇಲಾಖೆಯಿಂದ ಪರಿಶಿಷ್ಟ ಜಾತಿ ಉಪ ಯೋಜನೆ ಪರಿಶಿಷ್ಟ ಜಾತಿ & ಪಂಗಡಗಕ ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿ ನೀಡಿ ಪ್ರಾದೇಶಿಕ ಸಾರಿಗೆ ಕಚೇರಿಯಿಂದ ಚಾಲನಾ ಅನುಜ್ಞಾಪತ್ರ / ಬ್ಯಾಡ್ಜ್ ನೀಡುವ ಕಾರ್ಯಕ್ರಮವನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಆಸಕ್ತ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಈ ತರಬೇತಿಯನ್ನು ಪಡೆಯಲು ಇಚ್ಛಿಸುವ ಪರಿಶಿಷ್ಟ ಜಾತಿ (SC & ST) ಪಂಗಡಗಳ ಅಭ್ಯರ್ಥಿಗಳು ಈ ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಅಭ್ಯರ್ಥಿಗೆ ಕನಿಷ್ಠ 18೮ ವರ್ಷ ವಯೋಮಿತಿ ತುಂಬಿರಬೇಕು. ಗರಿಷ್ಟ 45 ವರ್ಷ
ಕನಿಷ್ಠ 20 ವರ್ಷಗಳ ವಯೋಮಿತಿ ಪೂರೈಸಿರಬೇಕು.
ಅರ್ಜಿ ಸಲ್ಲಿಸಲು ದಾಖಲೆಗಳು ಹೀಗಿವೆ:
1. ಜನ್ಮ ದಿನಾಂಕದ ಬಗ್ಗೆ ಜನನ ಪ್ರಮಾಣಪತ್ರ
2. SSLC ಅಂಕಪಟ್ಟಿ / ಶಾಲಾ ವರ್ಗಾವಣಾ ಪ್ರಮಾಣಪತ್ರ / ನೋಟರಿಯಿಂದ ಪ್ರಮಾಣಪತ್ರ
3. ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ
4. ಪಾಸ್ಪೋರ್ಟ್ ಅಳತೆಯ ಭಾವಚಿತ್ರ 5
❇ ಈ ತರಬೇತಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಉಚಿತವಾಗಿ ಊಟ ಮತ್ತು ವಸತಿ ಸೌಲಭ್ಯವಿರುತ್ತದೆ.
ಅರ್ಹ ಮತ್ತು ಆಸಕ್ತಿ ಇರುವ ಪರಿಶಿಷ್ಟ ಜಾತಿ/ಪಂಗಡದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆ ಮತ್ತು 02 ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಭೇಟಿ ನೀಡಿ ನಿಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು.
ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ೩ನೇ ಮಹಡಿ, ಶಾಂತಿನಗರ ಬಸ್ ನಿಲ್ದಾಣ ಬೆಂಗಳೂರು ೫೬೦ ೦೨೭