ಈ ಯೋಜನೆಯಡಿ ಸ್ವಂತ ಉದ್ಯೋಗ ಆರಂಭಿಸಲು ಸಾಲ ಮತ್ತು ಸಹಾಯಧನ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ಸಾಲಿನ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖರು, ಪಾರ್ಸಿಗಳು ಹಾಗೂ ಆಂಗ್ಲೋ ಇಂಡಿಯನ್ ಜನಾಂಗಕ್ಕೆ ಸೇರಿದವರು ಸ್ವಯಂ ಉದ್ಯೋಗ ಯೋಜನೆಗೆ ಸಾಲ, ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 29/2024 ಆಗಿದೆ.
ಅರ್ಜಿ ಸಲ್ಲಿಸಲು ಯಾರು ಅರ್ಹರು?
1. ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು
2. ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು
3. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು
4. ಎಲ್ಲಾ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದಲ್ಲಿ ರೂ 81,000 ರೂ ದಿಂದ ನಗರ ಪ್ರದೇಶದಲ್ಲಿ ರೂ 1,03,000 ಗಿಂತ ಕಡಿಮೆ ಇರಬೇಕು.
5. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ರಾಜ್ಯ ಸರ್ಕಾರೀ/ PSU ಉದ್ಯೋಗಿಯಾಗಿರಬಾರದು.
6. ಅರ್ಜಿದಾರರು KMDC ಯಲ್ಲಿ ಸುಸ್ತಿದಾರರಾಗಿರಬಾರದು.
ಸಹಾಯಧನ ಮೊತ್ತ ಎಷ್ಟು?
ಯೋಜನೆಯಡಿ ಅಲ್ಪಸಂಖ್ಯಾತರ ಸಮುದಾಯದ ಜನರಿಗೆ ವ್ಯಾಪಾರ, ಸಣ್ಣ ಪ್ರಮಾಣದ ಗುರಿ ಕೈಗಾರಿಕೆ, ಸೇವಾ ಕ್ಷೇತ್ರ, ಕೃಷಿ ಆಧಾರಿತ ಚಟುವಟಿಕೆಗಳು ಮುಂತಾದವುಗಳನ್ನು ಪ್ರಾರಂಭಿಸಲು ಸಾಲ ಮತ್ತು ಸಹಾಯಧನ ಒದಗಿಸಲಾಗುತ್ತದೆ. ಪ್ರತಿ ಘಟಕ ವೆಚ್ಚದ ಶೇ 33% ಅಥವಾ ಗರಿಷ್ಟ ಮಿತಿ ರೂ 1 ಲಕ್ಷದ ವರೆಗೆ ಸಹಾಯಧನ ನೀಡಲಾಗುತ್ತದೆ.
ಬೇಕಾದ ದಾಖಲೆಗಳು:
✔ ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ/ಅಲ್ಪಸಂಖ್ಯಾತ ಪ್ರಮಾಣಪತ್ರ
✔ ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣಪತ್ರ
✔ ಆಧಾರ್ ಕಾರ್ಡ್ ಪ್ರತಿ (ನಿವಾಸ ಪುರಾವೆ)
✔ ಯೋಜನಾ ವರದಿ
Tags
Govt.scheme