ನಮಸ್ಕಾರ ಸ್ನೇಹಿತರೇ.......ಕರ್ನಾಟಕ ಸರ್ಕಾರದಿಂದ ನೀಡಲಾಗುವ SSP Scholarship ೨೦೨೪ ವಿದ್ಯಾರ್ಥಿವೇತನ ಪಡೆಯಬೇಕೆ? ಹಾಗಿದ್ದರೆ ಈ ಲೇಖನದಲ್ಲಿ ಅರ್ಜಿ ಸಲ್ಲಿಕೆ ಬೇಕಾಗುವ ದಾಖಲೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಹತೆ ಇತ್ಯಾದಿ ಮಾಹಿತಿಯನ್ನು ತಿಳಿದು ಅರ್ಜಿ ಸಲ್ಲಿಸಬಹುದು.
ಮೆಟ್ರಿಕ್ ನಂತರದ ಕೋರ್ಸುಗಳಾದ ಪಿಯುಸಿ, ಪದವಿ, ಡಿಪ್ಲೋಮ, ತಾಂತ್ರಿಕ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ಗಳಲ್ಲಿ ಓದುತ್ತಿರುವ ಕರ್ನಾಟಕ ರಾಜ್ಯದಲ್ಲಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಒಬಿಸಿ ವಿದ್ಯಾರ್ಥಿಗಳಿಗೆ...
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ-ಊಟ ವಸತಿ ಸಹಾಯ ಯೋಜನೆಗೆ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-೧ ಅಲೆಮಾರಿ ಹಾಗೂ ಅರೆ ಅಲೆಮಾರಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ...
ಅಲ್ಪಸಂಖ್ಯಾತರ ನಿರ್ದೇಶನಾಲಯ ಬೆಂಗಳೂರುರವರಿಂದ ಪಿಯುಸಿ, ಡಿಪ್ಲೋಮಾ, ತಾಂತ್ರಿಕ ಮತ್ತು ವೃತ್ತಿಪರ ಪದವಿ ಕೋರ್ಸ್ ಗಳಲ್ಲಿ ಓದುತ್ತಿರುವ ಕರ್ನಾಟಕ ರಾಜ್ಯದಲ್ಲಿರುವ ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ 2023-24 ನೇ ಶಾಲಿನ ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು:
✔ SSLC ನೋಂದಣಿ ಸಂಖ್ಯೆ
✔ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
✔ ಆಧಾರ್ ಸಂಖ್ಯೆ
✔ ಮೊಬೈಲ್ ಸಂಖ್ಯೆ
✔ ಇ-ಮೇಲ್ ಐಡಿ
✔ ಕಾಲೇಜು ದಾಖಲಾತಿ / ನೋಂದಣಿ ಸ್ನಾಖ್ಯೆ
✔ ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ UID ಗುರುತಿನ ಚೀಟಿ
✔ ವಿದ್ಯಾರ್ಥಿಯು ವಾಸವಿರುವ ಜಿಲ್ಲೆ, ತಾಲೂಕು, ವಿಧಾನಸಭಾ ಕ್ಷೇತ್ರದ ಹೆಸರು ಮತ್ತು ಮನೆಯ ವಿಳಾಸ
ಮ್ಯಾಟ್ರಿಕ್ ನಂತರದ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಪೋಸ್ಟ್ ಮ್ಯಾಟ್ರಿಕ್ ವಿದ್ಯಾರ್ಥಿವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಅಜ್ರಿ ಸಲ್ಲಿಕೆಯ ಕೊನೆಯ ದಿನಾಂಕವಾಗಿರುವ 15-02-2024ರ ಮೊದಲು ಅರ್ಜಿ ಸಲ್ಲಿಸಬೇಕು.
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಿಂದ ಮ್ಯಾಟ್ರಿಕ್ ನಂತರದ ಕೋರ್ಸುಗಳಲ್ಲಿ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಪಂಗಡ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೊನೆಯ ದಿನಾಂಕ 31-03-2024 ಆಗಿರುತ್ತದೆ.
Tags
Scholarship

WhatsApp Group