ಈ ದಿನ ಸಿಗಲಿದೆ ಹೊಸ ಬಿಪಿಎಲ್ ಕಾರ್ಡ್ ....
ಹಲವು ದಿನಗಳ ಹಿಂದೆ ಅಷ್ಟೇ ರಾಜ್ಯದ ಜನತೆಗೆ ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಹೊಸ ಕಾರ್ಡ್ ವಿತರಣೆ ಮಾಡುವುದಾಗಿ ನಿರ್ಧರಿಸಿತ್ತು. ಆ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಲಲು ಜನರು ಕಾತುರದಿಂದ ಕಾಯುತ್ತಿದ್ದಾರೆ. ಆದ್ರೆ ಸರ್ಕಾರ ಹೊಸ ಕಾರ್ಡ್ ವಿತರಣೆಯನ್ನು ಮುಂದೂಡುತ್ತಲೇ ಬಂದಿದೆ. ಇದರ ಬಗ್ಗೆ ಮಾತನಾಡಿದ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆಎಚ್ ಮುನಿಯಪ್ಪ ರಾಜ್ಯದ ಜನತೆಗೆ ಸಿಹಿ ಸುದ್ದಿಯೊಂದನ್ನು ಕೊಟ್ಟಿದ್ದಾರೆ.
ಕೊನೆಗೂ ಭರವಸೆ ಮೂಡಿತೇ?
ರೇಷನ್ ಕಾರ್ಡ್ ಕಾಯುವಿಕೆ ಎರಡೂವರೆ ವರ್ಷಕ್ಕೆ ಮುಟ್ಟಿದೆ. 2020ರಲ್ಲಿ ಅರ್ಜಿ ಸಲ್ಲಿಸಿದರೂ ಈವರೆಗೆ ಯಾವುದೇ ಸುಳಿವು ಸಿಕ್ಕಿಲ್ಲದೆ ಕಾಯುತ್ತಿದ್ದ ಜನರಿಗೆ ಈಗ ಭರವಸೆ ಮೂಡಿದೆ . ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಮಾರ್ಚ್ 31ರೊಳಗೆ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಹೊಸ ಪಡಿತರ ಚೀಟಿ ವಿತರಣೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ಪಿಗ್ಮಿಕೆಲವು ತುರ್ತು ಅಗತ್ಯಗಳನ್ನು ಪೂರೈಸಲು, ಸರ್ಕಾರವು ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಈ ಯೋಜನೆಯಡಿ ಈ ಕೆಳಗಿನವರು ಅರ್ಜಿ ಸಲ್ಲಿಸಬಹುದು.
👉 ಹೊಸದಾಗಿ ಮದುವೆಯಾಗಿ ಸಂಸಾರ ಆರಂಭಿಸುವ ದಂಪತಿಗಳು.
👉 ಮದುವೆಯ ನಂತರ ಪ್ರತ್ಯೇಕವಾಗಿ ವಾಸಿಸುವ ದಂಪತಿಗಳು ಹೊಸ ರೇಷನ್ ಕಾರ್ಡ್‌ಗೆ ಅರ್ಹರಾಗುತ್ತಾರೆ..
👉 ಕುಟುಂಬದಿಂದ ಬೇರೆಯಾಗಿ ಜೀವನ ನಡೆಸುವ ದಂಪತಿಗಳು.
👉 ಈಗಾಗಲೇ ರೇಷನ್ ಕಾರ್ಡ್ ಹೊಂದಿರುವ ಕುಟುಂಬದಿಂದ ಪ್ರತ್ಯೇಕವಾಗಿ ವಾಸಿಸಲು ಪ್ರಾರಂಭಿಸುವ ದಂಪತಿಗಳು ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬಹುದು.
ರೇಷನ್ ಕಾರ್ಡ್ ತಿದ್ದುಪಡಿ ಅವಕಾಶ :
ಹೊಸ ಸದಸ್ಯರ ಸೇರ್ಪಡೆ, ತಪ್ಪುಗಳ ತಿದ್ದುಪಡಿ, ಮತ್ತು ವಿಳಾಸ ಬದಲಾವಣೆ ಸೇರಿದಂತೆ ರೇಷನ್ ಕಾರ್ಡ್‌ಗಳಲ್ಲಿ ತಿದ್ದುಪಡಿ ಮಾಡಲು ಸರ್ಕಾರ ಮತ್ತೊಮ್ಮೆ ಅವಕಾಶ ಕಲ್ಪಿಸಿದೆ. ಈ ಜೊತೆಗೆ, ಹೊಸ ರೇಷನ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಸಹ ಅವಕಾಶ ನೀಡಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಗ್ರಾಮ ಒನ್(Gram one), ಬೆಂಗಳೂರು ಒನ್(Bengaluru one) , ಮತ್ತು ಇತರ ಸೇವಾ ಕೇಂದ್ರಗಳಲ್ಲಿ ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದು.
ಆನ್ಲೈನ್ ಪೋರ್ಟಲ್ ನಿರ್ದಿಷ್ಟ ಸಮಯದಲ್ಲಿ ಮಾತ್ರ ತೆರೆದಿರುತ್ತದೆ. ಸೇವಾ ಕೇಂದ್ರದ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಿ.
Tags
Ration
Majamma.rammanna
ಪ್ರತ್ಯುತ್ತರಅಳಿಸಿPune.seenu.raxetha
8884354516